ಮುಸ್ಲಿಂರ ವಿರುದ್ಧ ತಾರತಮ್ಯ: ಇಮ್ರಾನ್ ಖಾನ್ ಆರೋಪ ಆಧಾರ ರಹಿತ, ಹಾಸ್ಯಾಸ್ಪದ- ಭಾರತ ತಿರುಗೇಟು

ಕೊರೋನಾವೈರಸ್ ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ ಭಾರತದಲ್ಲಿನ ಮುಸ್ಲಿಂರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರ ಆರೋಪವನ್ನು ಭಾರತ ತಳ್ಳಿ ಹಾಕಿದೆ.
ಪಾಕ್ ಪ್ರಧಾನಿ ಇಮ್ರಾನ್ ಖಾನ್
ಪಾಕ್ ಪ್ರಧಾನಿ ಇಮ್ರಾನ್ ಖಾನ್

ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ ಭಾರತದಲ್ಲಿನ ಮುಸ್ಲಿಂರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರ ಆರೋಪವನ್ನು ಭಾರತ ತಳ್ಳಿ ಹಾಕಿದೆ.

ಆ ದೇಶದ ಆಂತರಿಕ ವ್ಯವಹಾರಗಳ ಅಸಹ್ಯ ನಿರ್ವಹಣೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ನಿಟ್ಟಿನಲ್ಲಿ ಪಾಕಿಸ್ತಾನದ ಪ್ರಧಾನಿ ವಿಲಕ್ಷಣಕಾರಿ ಹೇಳಿಕೆಯಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅನುರಾಗ್ ಶ್ರಿವಾಸ್ತವ ಹೇಳಿದ್ದಾರೆ.

ಕೊರೋನಾವೈರ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತೀಯ ಸರ್ಕಾರ ಉದ್ದೇಶಪೂರ್ವಕವಾಗಿ ಮುಸ್ಲಿಂರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದರು. 

ಇದಕ್ಕೆ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು, ಕೋವಿಡ್-19 ವಿರುದ್ಧದ ಹೋರಾಟದ ಬದಲು ನೆರೆಯ ರಾಷ್ಟ್ರದ ಮೇಲೆ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಅಲ್ಪಸಂಖ್ಯಾತರ ವಿಚಾರದಲ್ಲಿ ಆ ದೇಶದಲ್ಲಿಯೇ ನಿಜವಾಗಿಯೂ ತಾರತಮ್ಯಕ್ಕೊಳಗಾಗಿರುವವರ ಬಗ್ಗೆ ಪಾಕಿಸ್ತಾನ ಪ್ರಧಾನ ಕಾಳಜಿ ವಹಿಸಬೇಕಾಗಿದೆ ಎಂದು ಶ್ರೀವಾಸ್ತವ ಹೇಳಿದ್ದಾರೆ. 

ಮುಸ್ಲಿಂರ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳಬೇಕೆಂದು ಇಸ್ಲಾಮಿಕ್ ಸಹಕಾರ ಸಂಘಟನೆ ಭಾನುವಾರ ಭಾರತವನ್ನು ಒತ್ತಾಯಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com