ಭಾರತಕ್ಕೆ ಗಡಿಪಾರು ಆದೇಶ ಪ್ರಶ್ನಿಸಿ ವಿಜಯ್ ಮಲ್ಯ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಬ್ರಿಟನ್ ಹೈಕೋರ್ಟ್

ಭಾರತದ ಬ್ಯಾಂಕುಗಳಿಗೆ ಸುಮಾರು 9 ಸಾವಿರ ಕೋಟಿ ಸಾಲ ಮರುಪಾವತಿ ಮಾಡದ ಪ್ರಕರಣದಲ್ಲಿ ಭಾರತಕ್ಕೆ ಗಡಿಪಾರು ಆದೇಶ ಪ್ರಶ್ನಿಸಿ ಮದ್ಯ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಅರ್ಜಿಯನ್ನು ಬ್ರಿಟನ್ ಹೈಕೋರ್ಟ್ ಇಂದು ವಜಾಗೊಳಿಸಿದೆ.
ವಿಜಯ್ ಮಲ್ಯ
ವಿಜಯ್ ಮಲ್ಯ

ನವದೆಹಲಿ:  ಭಾರತದ ಬ್ಯಾಂಕುಗಳಿಗೆ ಸುಮಾರು 9 ಸಾವಿರ ಕೋಟಿ ಸಾಲ ಮರುಪಾವತಿ ಮಾಡದ ಪ್ರಕರಣದಲ್ಲಿ ಭಾರತಕ್ಕೆ ಗಡಿಪಾರು ಆದೇಶ ಪ್ರಶ್ನಿಸಿ ಮದ್ಯ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಅರ್ಜಿಯನ್ನು ಬ್ರಿಟನ್ ಹೈಕೋರ್ಟ್ ಇಂದು ವಜಾಗೊಳಿಸಿದೆ.

ಭಾರತಕ್ಕೆ ಗಡಿಪಾರು ಆದೇಶ ಪ್ರಶ್ನಿಸಿ 64 ವರ್ಷದ ಕಿಂಗ್ ಪಿಶರ್ ಮಾಲೀಕ ಈ ವರ್ಷ ಫೆಬ್ರವರಿ ತಿಂಗಳಲ್ಲಿ ಬ್ರಿಟನ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. 

ಬ್ರಿಟನ್ ಹೈಕೋರ್ಟ್ ನ್ಯಾಯಾಧೀಶರಾದ ಸ್ಟೀಫನ್ ಇರ್ವಿನ್ ಮತ್ತು  ಎಲಿಜಬೆತ್ ಲಾಯಿಂಗ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವಿಜಯ್ ಮಲ್ಯ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com