ಕೋವಿಡ್-19: 24 ಗಂಟೆಗಳಲ್ಲಿ 1,383 ಹೊಸ ಪಾಸಿಟಿವ್ ಪ್ರಕರಣ, ಭಾರತದಲ್ಲಿ 20 ಸಾವಿರ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ, 645 ಸಾವು

ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಾದ್ಯಂತ 1,383 ಹೊಸ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಆ ಮೂಲಕ ದೇಶದಲ್ಲಿ ವೈರಸ್ ಸೋಂಕಿತರ ಸಂಖ್ಯೆ 20 ಸಾವಿರ ಗಡಿ ದಾಟಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಾದ್ಯಂತ 1,383 ಹೊಸ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಆ ಮೂಲಕ ದೇಶದಲ್ಲಿ ವೈರಸ್ ಸೋಂಕಿತರ ಸಂಖ್ಯೆ 20 ಸಾವಿರ ಗಡಿ ದಾಟಿದೆ.

ಹೌದು.. ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಭಾರತದಲ್ಲಿ ವೈರಸ್ ಸೋಂಕಿತರ ಸಂಖ್ಯೆ ಇದೀಗ 20 ಸಾವಿರ ಗಡಿ ದಾಟಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,383 ಹೊಸ  ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 20,111ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶದಲ್ಲಿ ಕೊರೋನಾ ವೈರಸ್ ಗೆ 50 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 645ಕ್ಕೆ  ಏರಿಕೆಯಾಗಿದೆ. ಅಂತೆಯೇ ದೇಶಾದ್ಯಂತ ಒಟ್ಟಾರೆ ಸೋಂಕಿತರ ಪೈಕಿ 3,975 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಗುಜರಾತ್ ನಲ್ಲಿ ಮತ್ತೆ ಐದು ಸಾವು
ಇತ್ತ ಗುಜರಾತ್ ನಲ್ಲಿ ಮಾರಕ ಕೊರೋನಾ ವೈರಸ್ ಗೆ ಮತ್ತೆ ಐದು ಮಂದಿ ಸೋಂಕಿತರು ಬಲಿಯಾಗಿದ್ದು, ಆ ಮೂಲಕ ಇಲ್ಲಿ ಕೊರೋನಾ ವೈರಸ್ ಸಾವಿನ ಸಂಖ್ಯೆ 95ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ಒಂದೇ ದಿನ 94 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು. ಆ  ಮೂಲಕ ಗುಜರಾತ್ ನಲ್ಲಿ ಸೋಂಕಿತರ ಸಂಖ್ಯೆ 2272ಕ್ಕೆ ಏರಿಕೆಯಾಗಿದೆ. ಅಂತೆಯೇ 144 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

5 more deaths in Gujarat due to #COVID19, death toll rises to 95 in the state. 94 COVID-19 positive cases have been reported taking the state tally to 2272 which includes 144 cured patients and 95 deaths: Health Department, Gujarat

ಮಹಾರಾಷ್ಟ್ರದಲ್ಲಿ 553 ಹೊಸ ಪಾಸಿಟಿವ್ ಪ್ರಕರಣ, 251ಕ್ಕೇರಿದ ಸಾವಿನ ಸಂಖ್ಯೆ
ಇನ್ನು ಕೊರೋನಾ ವೈರಸ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 553 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ದಾಖಲಾದ ಒಟ್ಟಾರೆ ಸೋಂಕಿತರ ಸಂಖ್ಯೆ 5229ಕ್ಕೆ ಏರಿಕೆಯಾಗಿದೆ. ಅಂತೆಯೇ ರಾಜ್ಯದಲ್ಲಿ ನಿನ್ನೆ 19 ಮಂದಿ  ಸೋಂಕಿತರು ಸಾವನ್ನಪ್ಪಿದ್ದು, ಇಲ್ಲಿ ವೈರಸ್ ಗೆ ಬಲಿಯಾದವರ ಸಂಖ್ಯೆ 251ಕ್ಕೆ ಏರಿಕೆಯಾಗಿದೆ. ಪುಣೆಯಲ್ಲಿ ಸಾವಿನ ಸಂಖ್ಯೆ 55ಕ್ಕೆ ಏರಿಕೆಯಾಗಿದ್ದು, ಮುಂಬೈನಲ್ಲಿ ನಿನ್ನೆ ಒಂದೇ ದಿನ 552 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. 

ರಾಜಸ್ಥಾನದಲ್ಲಿ 64 ಹೊಸ ಸೋಂಕು ಪ್ರಕರಣ
ಇನ್ನು ರಾಜಸ್ಥಾನದಲ್ಲಿ ನಿನ್ನೆ 64 ಹೊಸ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜಸ್ಥಾನದಲ್ಲಿ ಸೋಂಕಿತರ ಸಂಖ್ಯೆ 1799ಕ್ಕೆ ಏರಿಕೆಯಾಗಿದೆ. ಅಂತೆಯೇ ಇಲ್ಲಿ 26 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟಾರೆ ಸೋಂಕಿತರ ಪೈಕಿ ಈ ವರೆಗೂ  274 ಮಂದಿ ಗುಣಮುಖರಾಗಿದ್ದು, 97 ಮಂದಿ ಡಿಸ್ಟಾರ್ಜ್ ಆಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com