ಕೊರೋನಾ ವಾರಿಯರ್ಸ್ ಗೆ ಹೆಚ್ಚಿನ ಭದ್ರತೆ ನೀಡಿ, ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ತಾಕೀತು!

ಮಹಾಮಾರಿ ಕೊರೋನಾವನ್ನು ಮಟ್ಟ ಹಾಕಲು ಶ್ರಮಿಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಹೆಚ್ಚಿನ ಭದ್ರತೆ ನೀಡಿ, ಜೊತೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ತಾಕೀತು ಮಾಡಿದೆ. 
ಆರೋಗ್ಯ ಸಿಬ್ಬಂದಿ
ಆರೋಗ್ಯ ಸಿಬ್ಬಂದಿ

ನವದೆಹಲಿ: ಮಹಾಮಾರಿ ಕೊರೋನಾವನ್ನು ಮಟ್ಟ ಹಾಕಲು ಶ್ರಮಿಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಹೆಚ್ಚಿನ ಭದ್ರತೆ ನೀಡಿ, ಜೊತೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ತಾಕೀತು ಮಾಡಿದೆ. 

ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆಗಳು ನಡೆಯುತ್ತಿರುವುದರಿಂದ ಇದನ್ನು ಸಮರ್ಥವಾಗಿ ಎದುರಿಸಲು ಹೆಚ್ಚಿನ ಭದ್ರತೆ ನೀಡಿ ಎಂದು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಅಜಯ್ ಬಲ್ಲಾ ಅವರು ನಿರ್ದೇಶನ ನೀಡಿದ್ದಾರೆ. 

ಕೊರೋನಾ ಸೋಂಕಿತರನ್ನು ಕ್ವಾರಂಟೈನಾ ಮಾಡುವ ಸಂದರ್ಭದಲ್ಲಿ ಹಲವು ಆರೋಗ್ಯ ಸಿಬ್ಬಂದಿ ಮೇಲೆ ಪುಂಡರು ಹಲ್ಲೆಗಳು ನಡೆಸಿರುವುದು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದು ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಠಿಣ ನಿರ್ಧಾರವನ್ನು ಕೈಗೊಂಡಿದೆ. 

ಯಾರೇ ಆಗಲಿ ಆರೋಗ್ಯ ಸಿಬ್ಬಂದಿಗಳ ಕೆಲಸಗಳಿಗೆ ಅಡ್ಡಿ ಉಂಟು ಮಾಡುವ ಅಥವಾ ಹಲ್ಲೆಗೆ ಮುಂದಾದರೆ ಅಂತಹವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಿ. ಒಂದು ವೇಳೆ ಆರೋಗ್ಯ ಸಿಬ್ಬಂದಿಗಳೇ ಇಲ್ಲದಿದ್ದರೆ ಸೋಂಕಿತರು ಕೊರೋನಾಗೆ ಬಲಿಯಾಗಬೇಕಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. 

ಪ್ರಧಾನಿ ಮೋದಿ ಟ್ವೀಟ್
2020 ಸಾಂಕ್ರಾಮಿಕ ರೋಗಗಳ (ತಿದ್ದುಪಡಿ) ಸುಗ್ರೀವಾಜ್ಞೆ, COVID-19 ವಿರುದ್ಧ ಧೈರ್ಯದಿಂದ ಹೋರಾಡುತ್ತಿರುವ ಪ್ರತಿಯೊಬ್ಬ ಆರೋಗ್ಯ ಕಾರ್ಯಕರ್ತರನ್ನು ರಕ್ಷಿಸುವ ನಮ್ಮ ಬದ್ಧತೆಯನ್ನು ಸ್ಪಷ್ಟಪಡಿಸುತ್ತದೆ.

ಇದು ನಮ್ಮ ವೃತ್ತಿಪರರ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಅವರ ಸುರಕ್ಷತೆಯ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com