ಕೋವಿಡ್-19 ಹೋರಾಟದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಹಕಾರ ಮುಖ್ಯ: ಡಾ. ಮನಮೋಹನ್ ಸಿಂಗ್

ಕೊರೋನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರದಿಂದ ಹೋರಾಡುವುದು ಅತ್ಯಗತ್ಯ ಎಂದು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಡಾ.ಮನಮೋಹನ್ ಸಿಂಗ್
ಡಾ.ಮನಮೋಹನ್ ಸಿಂಗ್

ನವದೆಹಲಿ: ಕೊರೋನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರದಿಂದ ಹೋರಾಡುವುದು ಅತ್ಯಗತ್ಯ ಎಂದು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ವಿಡಿಯೊ ಕಾನ್ಫರೆನ್ಸ್ ಮೂಲಕ ದೆಹಲಿಯಲ್ಲಿ ಇಂದು ಅವರು, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿ, ಕೋವಿಡ್-19 ವೈರಸ್ ನ್ನು ತಡೆಗಟ್ಟುವಲ್ಲಿ ನಾವು ಎಷ್ಟು ಸಮರ್ಥರಾಗಿದ್ದೇವೆ ಎನ್ನುವುದರ ಮೇಲೆ ಲಾಕ್ ಡೌನ್ ನ ಯಶಸ್ಸು ನಿರ್ಧರಿತವಾಗುತ್ತದೆ. ಈ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಹಕಾರ ಅತ್ಯಗತ್ಯ. ಸಂಪನ್ಮೂಲಗಳ ಲಭ್ಯತೆ ಮೇಲೆ ಕೊರೋನಾ ವಿರುದ್ಧದ ಹೋರಾಟ ಅವಲಂಬಿತವಾಗಿರುತ್ತದೆ ಎಂದರು.

ಕೇಂದ್ರ ಸರ್ಕಾರದಿಂದ ಕೊರೋನಾ ವಿರುದ್ಧ ಹೋರಾಟದಲ್ಲಿ ಸಹಕಾರ ಸಿಗುತ್ತಿಲ್ಲ ಎಂದು ಸಭೆಯಲ್ಲಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com