ಮಧ್ಯ ಪ್ರದೇಶ: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕುರುಡಾಗಿಸಿದ ಪಾಪಿ

ದೇಶಾದ್ಯಂತ ಲಾಕ್ ಡೌನ್ ಮಧ್ಯೆಯೇ ಮಧ್ಯ ಪ್ರದೇಶದಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬಳಿಕ ಬಾಲಕಿಗೆ ಕಣ್ಣು ಕಾಣದಂತೆ ಮಾಡಿದ ಅಮಾನವೀಯ ಘಟನೆ ದಮೋಹ್ ಜಿಲ್ಲೆಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಭೋಪಾಲ್: ದೇಶಾದ್ಯಂತ ಲಾಕ್ ಡೌನ್ ಮಧ್ಯೆಯೇ ಮಧ್ಯ ಪ್ರದೇಶದಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬಳಿಕ ಬಾಲಕಿಗೆ ಕಣ್ಣು ಕಾಣದಂತೆ ಮಾಡಿದ ಅಮಾನವೀಯ ಘಟನೆ ದಮೋಹ್ ಜಿಲ್ಲೆಯಲ್ಲಿ ನಡೆದಿದೆ.

ದಮೋಹ್ ಜಿಲ್ಲೆಯಿಂದ 280 ಕಿ.ಮೀ. ದೂರದಲ್ಲಿರುವ ಜಬೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ಸಂಜೆಯಿಂದ ನಾಪತ್ತೆಯಾಗಿದ್ದ ಬಾಲಕಿ ಇಂದು ಬೆಳಗ್ಗೆ ಮನೆಯೊಂದರಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಕೈಕಟ್ಟಿಹಾಕಲಾಗಿದೆ. 

ಸ್ಥಳೀಯರು ಮಾಹಿತಿ ನೀಡಿದ ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬಳಿಕ ಆಕೆಯ ಕಣ್ಣು ಕಾಣದಂತೆ ಮಾಡಲಾಗಿದೆ. ಕಣ್ಣುಗಳಿಗೆ ಗಂಭೀರ ಗಾಯಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯನ್ನು ಜಬಲಪುರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಣ್ಣುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಬೇಕಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಚಹ್ವಾಣ್ ಅವರು ಹೇಳಿದ್ದಾರೆ.

ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ಚಹ್ವಾಣ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com