ದೆಹಲಿ ಏಮ್ಸ್ ಆಸ್ಪತ್ರೆಯ ನರ್ಸ್ ಗೆ ಕೊರೋನಾ ಸೋಂಕು; ವೈದ್ಯರು ಸೇರಿ 40 ಸಿಬ್ಬಂದಿ ಕ್ವಾರಂಟೈನ್ ಗೆ

ಕರ್ತವ್ಯದಲ್ಲಿದ್ದ ನರ್ಸ್ ಒಬ್ಬರಲ್ಲಿ ಕೊರೋನಾ ವೈರಸ್ ಸೋಂಕು ಕಂಡುಬಂದ ಹಿನ್ನಲೆಯಲ್ಲಿ ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು, ಇತರೆ ನರ್ಸ್ ಗಳು ಮತ್ತು ವೈದ್ಯಕೀಯ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.
ದೆಹಲಿ ಏಮ್ಸ್ ಆಸ್ಪತ್ರೆ (ಸಂಗ್ರಹ ಚಿತ್ರ)
ದೆಹಲಿ ಏಮ್ಸ್ ಆಸ್ಪತ್ರೆ (ಸಂಗ್ರಹ ಚಿತ್ರ)

ನವದೆಹಲಿ: ಕರ್ತವ್ಯದಲ್ಲಿದ್ದ ನರ್ಸ್ ಒಬ್ಬರಲ್ಲಿ ಕೊರೋನಾ ವೈರಸ್ ಸೋಂಕು ಕಂಡುಬಂದ ಹಿನ್ನಲೆಯಲ್ಲಿ ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು, ಇತರೆ ನರ್ಸ್ ಗಳು ಮತ್ತು ವೈದ್ಯಕೀಯ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.

ಏಮ್ಸ್ ಆಸ್ಪತ್ರೆಯ ಕೋವಿಡ್-19 ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 35 ವರ್ಷದ ಪುರುಷ ಸಿಬ್ಬಂದಿಯಲ್ಲಿ ಇಂದು ಸೋಂಕು ದೃಢಪಟ್ಟಿತ್ತು. ಹೀಗಾಗಿ ಕೂಡಲೇ ಎಚ್ಚೆತ್ತ ಏಮ್ಸ್ ಆಡಳಿತ ಮಂಡಳಿ ಮುಂಜಾಗ್ರತಾ ಕ್ರಮವಾಗಿ ಸೋಂಕಿತ ಸಿಬ್ಬಂದಿಯ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಕ್ಕೆ  ಬಂದಿದ್ದ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಿದೆ. 

ಅಲ್ಲದೆ ಮುಂದಿನ 5 ದಿನಗಳ ಕಾಲ ಆಸ್ಪತ್ರೆಯ ಎಲ್ಲ ವೈದ್ಯಕೀಯ ಸಿಬ್ಬಂದಿಗಳನ್ನೂ ಕೋವಿೃಡ್-19 ಪರೀಕ್ಷೆಗೊಳಪಡಿಸಲಾಗುತ್ತದೆ. ಅಂತೆಯೇ ಆಸ್ಪತ್ರೆಯಲ್ಲದೇ ಸೋಂಕಿತ ಸಿಬ್ಬಂದಿಯ ಟ್ರಾವಲ್ ಹಿಸ್ಟರಿ ಪತ್ತೆ ಮಾಡಲಾಗುತ್ತಿದೆ.

ಇನ್ನು ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಪ್ರಸ್ತುತ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 2,376ಕ್ಕೆ ಏರಿಕೆಯಾಗಿದ್ದು, ಈ ಪೈಕಿ ನಿನ್ನೆ ಒಂದೇ ದಿನ 128 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಅಂತೆಯೇ ದೆಹಲಿಯಲ್ಲಿ 50 ಮಂದಿ  ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com