ಸರ್ಕಾರದ ಆದೇಶ ದಿಕ್ಕರಿಸಿ, ಕರ್ತವ್ಯಕ್ಕೆ ಹಾಜರಾಗದ ಐಎಎಸ್ ಅಧಿಕಾರಿ ವಿರುದ್ಧ ಎಫ್ ಐಆರ್ ದಾಖಲು

ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಮಧ್ಯೆ ಸರ್ಕಾರದ ಆದೇಶ ದಿಕ್ಕರಿಸಿ ಕರ್ತವ್ಯಕ್ಕೆ ಹಾಜರಾಗದ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.  
ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್
ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್

ನವದೆಹಲಿ:ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಮಧ್ಯೆ ಸರ್ಕಾರದ ಆದೇಶ ದಿಕ್ಕರಿಸಿ ಕರ್ತವ್ಯಕ್ಕೆ ಹಾಜರಾಗದ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಣ್ಣನ್ ಗೋಪಿನಾಥನ್,ಜಮ್ಮು ಮತ್ತು ಕಾಶ್ಮೀರಕ್ಕೆ ಶಾಶ್ವತ ಸ್ಥಾನಮಾನವನ್ನು ರದ್ದುಗೊಳಿಸಿ ನಿರ್ಬಂಧವನ್ನು ಹೇರಿದ ನಂತರ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಭಾರತೀಯ ಆಡಳಿತ ಸೇವೆಗೆ ರಾಜೀನಾಮೆ ನೀಡಿದ್ದರು.

ಸಾಂಕ್ರಾಮಿಕ ಕಾಯಿಲೆಗಳ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ದಾಮನ್ ಮತ್ತು ಡಿಯು, ದಾದ್ರಾ ಮತ್ತು ನಗರ್ ಹವೇಲಿ ಕೇಂದ್ರಾಡಳಿತ ಪ್ರದೇಶದಲ್ಲಿರುವ ಮೊತಿ ದಾಮನ್ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 21 ರಂದು ಕಣ್ಣನ್ ಗೋಪಿನಾಥನ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

ಸರ್ಕಾರದ ಆದೇಶ ದಿಕ್ಕರಿಸಿದ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 188 ಅಡಿಯಲ್ಲಿಯೂ ಕಣ್ಣನ್ ಗೋಪಿನಾಥನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಲಿಲಾಧರ್ ಮಕ್ವಾನಾದ ಪೊಲೀಸ್ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ. 

ಕೇರಳ ಮೂಲದ ಗೋಪಿನಾಥನ್, ಜಮ್ಮು ಮತ್ತು ಕಾಶ್ಮೀರದ ಜನರಿಗೆ ಸ್ವಾತಂತ್ಯ್ರ ನಿರಾಕರಣೆ ವಿಚಾರವಾಗಿ ಭಾರತೀಯ ಆಡಳಿತ ಸೇವೆಗೆ ರಾಜೀನಾಮೆ ನೀಡಿದ್ದರು. ಕೊರೋನಾವೈರಸ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತನ್ನ ಕರ್ತವ್ಯವನ್ನು ಪುನರಾರಂಭಿಸದ ಕಾರಣ ಸಿಬ್ಬಂದಿ ಅಧೀಕ್ಷಕರು ನೀಡಿರುವ ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. 

ರಾಜೀನಾಮೆ ಇನ್ನೂ ಅಂಗೀಕಾರವಾಗದ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಏಪ್ರಿಲ್ 9 ರಂದು ಕೇಂದ್ರಾಡಳಿತ ಪ್ರದೇಶದ ಆಡಳಿತದಿಂದ ಗೋಪಿನಾಥ್ ಅವರಿಗೆ ಪತ್ರವನ್ನು ಕಳುಹಿಸಲಾಗಿತ್ತು. ಇದನ್ನು ಕಿರುಕುಳದ ಪತ್ರ ಎಂದು ಹೇಳಿದ ಗೋಪಿನಾಥನ್, ಕರ್ತವ್ಯಕ್ಕೆ ಹಾಜರಾಗಲು ನಿರಾಕರಿಸಿ, ಸಾಮಾನ್ಯ ನಾಗರಿಕನಾಗಿ ಕೋವಿಡ್-19 ವಿರುದ್ಧ ಸೇವೆ ಮಾಡಲು ಸಿದ್ಧವಿರುವುದಾಗಿ ಹೇಳಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com