ಕೋವಿಡ್-19: ಕೊರೋನಾದಿಂದ ತ್ರಿಪುರ ಮುಕ್ತ, ದೇಶದಲ್ಲಿ ಸೋಂಕಿತರ ಸಂಖ್ಯೆ 23 ಸಾವಿರಕ್ಕೆ ಏರಿಕೆ, 718 ಮಂದಿ ಸಾವು

ಭಾರತದಲ್ಲಿ ಕೊರೋನಾ ಪ್ರಭಾವರ ಏರುತ್ತಲೇ ಇದ್ದು, ಸೋಂಕಿತರ ಸಂಖ್ಯೆ 23,000ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮಹಾಮಾರಿಗೆ ದೇಶದ ವಿವಿಧ ರಾಜ್ಯಗಳಲ್ಲಿ 718 ಮಂದಿ ಬಲಿಯಾಗಿದ್ದಾರೆಂದು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಕೊರೋನಾ ಪ್ರಭಾವರ ಏರುತ್ತಲೇ ಇದ್ದು, ಸೋಂಕಿತರ ಸಂಖ್ಯೆ 23,000ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮಹಾಮಾರಿಗೆ ದೇಶದ ವಿವಿಧ ರಾಜ್ಯಗಳಲ್ಲಿ 718 ಮಂದಿ ಬಲಿಯಾಗಿದ್ದಾರೆಂದು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 1684 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 37 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 23,077ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 718 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, 23,077 ಮಂದಿ ಸೋಂಕಿತರ ಪೈಕಿ 4749 ಮಂದಿ ವೈರಸ್ ನಿಂದ ಗುಣಮುಖರಾಗಿದ್ದೂ, ಇನ್ನೂ 17,610 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿಸಿದೆ. 

ಈ ನಡುವೆ ದೇಶದಲ್ಲಿ ಕೊರೋನಾ ಪೀಡಿತ ರಾಜ್ಯಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದ ತ್ರಿಪುರ ಇದೀಗ ಕೊರೋನಾದಿಂದ ಮುಕ್ತಗೊಂಡಿದೆ. 

ತ್ರಿಪುರ ರಾಜ್ಯದಲ್ಲಿ ಈ ಹಿಂದೆ ಇಬ್ಬರಲ್ಲಿ ವೈರಸ್ ಪತ್ತೆಯಾಗಿತ್ತು. ಇದೀಗ ಈ ಇಬ್ಬರೂ ಕೂಡ ವೈರಸ್ ನಿಂದ ಗುಣಮುಖರಾಗಿದ್ದು, ವೈರಸ್ ನಿಂದ ಮುಕ್ತಗೊಂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com