ಮಹಾರಾಷ್ಟ್ರದಲ್ಲಿ ಇನ್ನು ಕೊರೋನಾ ವೈರಸ್ ಪರೀಕ್ಷೆ, ಚಿಕಿತ್ಸೆ ಸಂಪೂರ್ಣ ಉಚಿತ

ಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ಸರ್ಕಾರ ತನ್ನ ರಾಜ್ಯದಲ್ಲಿ ಕೊರೋನಾ ವೈರಸ್ ಪರೀಕ್ಷೆ ಮತ್ತು ಚಿಕಿತ್ಸೆಯನ್ನು ಸಂಪೂರ್ಣವಾಗಿ ಉಚಿತಗೊಳಿಸಿದೆ.
ಕೊರೋನಾ ಪರೀಕ್ಷೆ
ಕೊರೋನಾ ಪರೀಕ್ಷೆ

ಮುಂಬೈ: ಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ಸರ್ಕಾರ ತನ್ನ ರಾಜ್ಯದಲ್ಲಿ ಕೊರೋನಾ ವೈರಸ್ ಪರೀಕ್ಷೆ ಮತ್ತು ಚಿಕಿತ್ಸೆಯನ್ನು ಸಂಪೂರ್ಣವಾಗಿ ಉಚಿತಗೊಳಿಸಿದೆ.

ಹೌದು.. ದೇಶದಲ್ಲಿ ಅತೀ ಹೆಚ್ಚಿನ ಪ್ರಮಾಣದ ಕೊರೋನಾ ವೈರಸ್ ಸೋಂಕು ಮತ್ತು ಸಾವಿನ ಪ್ರಕರಣಗಳು ಕಂಡುಬಂದಿರುವ ಮಹಾರಾಷ್ಟ್ರದಲ್ಲಿ ಇನ್ನು ಮುಂದೆ ಕೊರೋನಾ ವೈರಸ್ ಪರೀಕ್ಷೆ ಮತ್ತು ಚಿಕಿತ್ಸೆಯನ್ನು ಸಂಪೂರ್ಣವಾಗಿ ಉಚಿತಗೊಳಿಸಲಾಗಿದೆ. ಈ ಬಗ್ಗೆ ಮಹಾರಾಷ್ಟ್ರ  ಸಚಿವ  ಅಮಿತ್ ದೇಶ್ ಮುಖ್ ಮಾಹಿತಿ ನೀಡಿದ್ದು, ಹಣದ ಭೀತಿಯಿಂದ ಜನರು ಕೊರೋನಾ ವೈರಸ್ ಪರೀಕ್ಷೆಯಿಂದ ದೂರ ಉಳಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಕೊರೋನಾ ವೈರಸ್ ಪರಿಸ್ಥಿತಿಯನ್ನು ಮಹಾರಾಷ್ಟ್ರ ಸರ್ಕಾರ ತುಂಬಾ ಗಂಭೀರವಾಗಿ ಪರಿಗಣಿಸಿದೆ. ದೇಶದಲ್ಲೇ ಅತೀ ಹೆಚ್ಚಿನ ಪ್ರಮಾಣದ ಸೋಂಕಿತರು ಮತ್ತು ಸಾವಿನ ಸಂಖ್ಯೆ ನಮ್ಮ ರಾಜ್ಯದಲ್ಲಿದೆ. ಯಾವುದೇ ಕಾರಣಕ್ಕೂ ಜನರು ಕೊರೋನಾ ವೈರಸ್ ಪರೀಕ್ಷೆಯಿಂದ  ತಪ್ಪಿಸಿಕೊಳ್ಳಬಾರದು ಎಂಬ ಮುಂಜಾಗ್ರತೆಯಿಂದಾಗಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಜನರು ಚಿಕಿತ್ಸಾ ವೆಚ್ಚದ ಬಗ್ಗೆ ಚಿಂತೆ ಮಾಡದೇ ಚಿಕಿತ್ಸೆ ಪಡೆಯಬೇಕು. ಇದಕ್ಕಾಗಿ ರಾಜ್ಯದಲ್ಲಿ ಸುಮಾರು 1000 ಆಸ್ಪತ್ರೆಗಳನ್ನು ನಿಯೋಜಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. 

ಒಂದೇ ದಿನ 811 ಹೊಸ ಕೊರೊನಾ ಪ್ರಕರಣ 
ಇನ್ನು ದೇಶದಲ್ಲೇ ಅತಿ ಹೆಚ್ಚು ಕೋವಿಡ್ -19 ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ  ಒಂದೇ ದಿನ 811 ಹೊಸ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 7,628 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಶನಿವಾರವೇ 22 ಜನರು ಕೋವಿಡ್ -19ನಿಂದಾಗಿ  ಸಾವಿಗೀಡಾಗಿದ್ದು, ಮೃತರ ಸಂಖ್ಯೆ 323ಕ್ಕೆ ಏರಿಕೆಯಾಗಿದೆ. ಹೀಗಿದ್ದರೂ ರಾಜ್ಯದಲ್ಲಿ ಕೆಲವು ದಿನಗಳ ಹಿಂದೆ ಶೇ 8 ರಷ್ಟಿದ್ದ ಮರಣ ಪ್ರಮಾಣವು ಶೇ 4.4ಕ್ಕೆ ಇಳಿದಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ -19 ಪ್ರಕರಣಗಳ ದ್ವಿಗುಣಗೊಳ್ಳುವಿಕೆಯು ಹೆಚ್ಚಾಗಿದೆ ಎಂದು ಆರೋಗ್ಯ ಇಲಾಖೆ  ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com