ಪಶ್ಚಿಮ ಬಂಗಾಳ: ಸರ್ಕಾರಿ ಹಿರಿಯ ವೈದ್ಯ, ಮತ್ತೊಬ್ಬ ವ್ಯಕ್ತಿ ಕೊರೋನಾಗೆ ಬಲಿ

ಕೊರೋನಾ ವೈರಸ್ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಪಶ್ಚಿಮ ಬಂಗಾಳ ಸರ್ಕಾರದ ಹಿರಿಯ ವೈದ್ಯರೊಬ್ಬರು ಭಾನುವಾರ ಕೊವಿಡ್-19ಗೆ ಬಲಿಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೋಲ್ಕತಾ: ಕೊರೋನಾ ವೈರಸ್ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಪಶ್ಚಿಮ ಬಂಗಾಳ ಸರ್ಕಾರದ ಹಿರಿಯ ವೈದ್ಯರೊಬ್ಬರು ಭಾನುವಾರ ಕೊವಿಡ್-19ಗೆ ಬಲಿಯಾಗಿದ್ದಾರೆ. ಅಲ್ಲದೆ ಅವರೊಂದಿಗೆ 34 ವರ್ಷದ ಮತ್ತೊಬ್ಬ ವ್ಯಕ್ತಿ ಸಹ ಕೊರೋನಾ ವೈರಸ್ ನಿಂದ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಆರೋಗ್ಯ ಸೇವೆಗಳ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ 60 ವರ್ಷದ ವೈದ್ಯರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಏಫ್ರಿಲ್ 18ರಂದು ಅವರನ್ನು ಸಾಲ್ಟ್ ಲೇಕ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಕೊರೋನಾ ಸೋಂಕಿತ ನಗರದ ಗಾರ್ಡನ್ ರೀಚ್ ಪ್ರದೇಶದ ಮತ್ತೊಬ್ಬ ವ್ಯಕ್ತಿ ಇಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ಮೃತಪಟ್ಟಿದ್ದಾರೆ. ಈ ವ್ಯಕ್ತಿಯನ್ನು ಏಪ್ರಿಲ್ 23ರಂದು ಕೊವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವ್ಯಕ್ತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಇದುವರೆಗೆ 18 ಮಂದಿ ಕೊವಿಡ್-19 ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 541ಕ್ಕೆ ಏರಿಕೆಯಾಗಿದೆ ಎಂದು ಪಶ್ಚಿಮ ಬಂಗಾಳ ಆರೋಗ್ಯ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com