ರಾಜಸ್ಥಾನ: ಲಾಕ್ ಡೌನ್ ನಲ್ಲಿ ಸಿಲುಕಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ರಾಜಸ್ಥಾನ ಸವಾಯಿಮಧೋಪುರ್ ಜಿಲ್ಲೆಯಲ್ಲಿ ಸಿಲುಕಿದ್ದ ಮಹಿಳೆಯೊಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜೈಪುರ್: ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ರಾಜಸ್ಥಾನ ಸವಾಯಿಮಧೋಪುರ್ ಜಿಲ್ಲೆಯಲ್ಲಿ ಸಿಲುಕಿದ್ದ ಮಹಿಳೆಯೊಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಅಜ್ಮೇರಾದ 40 ವರ್ಷದ ಮಹಿಳೆ ಲಾಕ್ ಡೌನ್ ಪರಿಣಾಮ ಕಳೆದ ಒಂದು ತಿಂಗಳಿಂದ ಊರಿಗೆ ತೆರಳಲು ಸಾಧ್ಯವಾಗದೆ ಸವಾಯಿಮಧೋಪುರ್ ಜಿಲ್ಲೆಯ ಗ್ರಾಮವೊಂದರಲ್ಲಿ ಸಿಲುಕಿದ್ದರು. ಆಕೆಯ ಮೇಲೆ ಮೂವರು ಯುವಕರು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಗುರುವಾರ ರಾತ್ರಿ ನಡೆದುಕೊಂಡೇ ಜೈಪುರಕ್ಕೆ ಹೋಗುತ್ತಿದ್ದರು. ಈ ವೇಳೆ ದಾರಿ ತಪ್ಪಿ ಈ ವೇಳೆ ದಾರಿ ತಪ್ಪಿ ಶಾಲೆಯಲ್ಲಿ ಉಳಿದುಕೊಂಡಿದ್ದಾರೆ. ರಾತ್ರಿ ಆಕೆಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಮೂವರು ಯುವಕರನ್ನು ಬಂಧಿಸಲಾಗಿದೆ ಎಂದು ಸವಾಯಿಮಧೋಪುರ್ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಚೌಧರಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com