ಜಮ್ಮು ಕಾಶ್ಮೀರ: ಭಯೋತ್ಪಾದಕರ ವಿರುದ್ಧದ ಸೇನಾ ಎನ್‌ಕೌಂಟರ್ ಗೆ ಮೂವರು ಉಗ್ರರು ಫಿನಿಶ್!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದಿದ್ದು  ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದಿದ್ದು  ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಖಾಜಿಗುಂಡ್ ಪ್ರದೇಶದ ಲೋವರ್ ಮುಂಡಾದಲ್ಲಿ ಭದ್ರತಾ ಪಡೆಗಳ ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ಗುಂಡು ಹಾರಿಸಿದ್ದಾರೆ. ಆಗ ಎನ್‌ಕೌಂಟರ್ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಗ್ರರ ಮೇಲೆ ಭದ್ರತಾ ಪಡೆಗಳು ಪ್ರತೀಕಾರ ತೀರಿಸಿಕೊಂಡಿದ್ದು ಇದು ಪ್ರಬಲ ಪ್ರತಿರೋಧಕ್ಕೆ ಎಡೆಮಾಡಿದೆ.

ಲೋವರ್ ಮುಂಡಾದಲ್ಲಿ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಹೇಳಿದ್ದಾರೆ.

ಇತ್ತೀಚಿನ ವರದಿಗಳು ಬಂದಾಗ ಸೇನಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು  ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com