ಉತ್ತರ ಪ್ರದೇಶ: ಸರಣಿ ಕೊಲೆಗಳ ಬಗ್ಗೆ ತನಿಖೆಗೆ ಪ್ರಿಯಾಂಕಾ ಗಾಂಧಿ ಒತ್ತಾಯ

ಕಳೆದ 15 ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ 100 ಜನರ ಹತ್ಯೆಯಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಬುಲಂದ್ಶೆಹರ್ ನಲ್ಲಿ ನಡೆದ ಇಬ್ಬರು ಸಾಧುಗಳ ಕೊಲೆ ಪ್ರಕರಣವನ್ನು ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ

ನವದೆಹಲಿ: ಕಳೆದ 15 ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ 100 ಜನರ ಹತ್ಯೆಯಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಬುಲಂದ್ಶೆಹರ್ ನಲ್ಲಿ ನಡೆದ ಇಬ್ಬರು ಸಾಧುಗಳ ಕೊಲೆ ಪ್ರಕರಣವನ್ನು ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನು ರಾಜಕೀಯಗೊಳಿಸದೆ ಕೊಲೆಗಳ ಹಿಂದಿರುವ ಸತ್ಯವನ್ನು ದೃಢಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.

15 ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ 100 ಜನರ ಹತ್ಯೆಯಾಗಿದೆ. ಮೂರು ದಿನಗಳ ಹಿಂದಷ್ಟೇ ಇಟಾದಲ್ಲಿ ಪಚೌರಿ ಕುಟುಂಬದ ಐವರ ಮೃತದೇಹಗಳು ನಿಗೂಢ ರೀತಿಯಲ್ಲಿ ಪತ್ತೆಯಾಗಿತ್ತು. ಅವರಿಗೆ ಏನಾಯಿತು ಎಂಬುದರ ಬಗ್ಗೆ ಯಾರಿಗೂ ಗೊತ್ತಿಲ್ಲ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇಂದು ಬುಲಂದ್ಶೆಹರ್ ನಲ್ಲಿರುವ ದೇವಾಲಯವೊಂದರ ಬಳಿ ಇಬ್ಬರು ಸಾಧುಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆಗಳನ್ನು ರಾಜಕೀಯಗೊಳಿಸದೆ ತನಿಖೆ ನಡೆಸಬೇಕೆಂದು ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com