ಕೋವಿಡ್-19: ದೇಶದ 80 ಜಿಲ್ಲೆಗಳಲ್ಲಿ ಕಳೆದ 7 ದಿನಗಳಿಂದ ಯಾವುದೇ ಹೊಸ ಪ್ರಕರಣಗಳಿಲ್ಲ, 30,000 ಗಡಿಯತ್ತ ಸೋಂಕಿತರ ಸಂಖ್ಯೆ 

ದೇಶದಲ್ಲಿ ಕೊರೋನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಈ ಮಧ್ಯೆ ಕಳೆದೊಂದು ವಾರದಲ್ಲಿ ದೇಶದಲ್ಲಿ 80 ಜಿಲ್ಲೆಗಳಲ್ಲಿ ಯಾವುದೇ ಸೋಂಕು ಪ್ರಕರಣ ದಾಖಲಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಹೇಳಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಈ ಮಧ್ಯೆ ಕಳೆದೊಂದು ವಾರದಲ್ಲಿ ದೇಶದಲ್ಲಿ 80 ಜಿಲ್ಲೆಗಳಲ್ಲಿ ಯಾವುದೇ ಸೋಂಕು ಪ್ರಕರಣ ದಾಖಲಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಹೇಳಿದ್ದಾರೆ. 

ಈ ನಡುವೆ ದೇಶದಲ್ಲಿ ಸೋಂಕಿತರ ಸಂಖ್ಯೆ 30,000 ಗಡಿ ದಾಟುತ್ತಿದ್ದು, ಈವರೆಗೂ 29,974 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆಲ ಅಲ್ಲದೆ, 937 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ 7027 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಮತ್ತು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಸಚಿವಾಲಯ ಮಾಹಿತಿ ನೀಡಿದೆ. 

ಕೊರೋನಾಗೆ ಈ ವರೆಗೂ ಯಾವುದೇ ಅಂಗೀಕೃತ ಚಿಕಿತ್ಸೆಗಳಿಲ್ಲ. ಮಾರಕ ವೈರಾಣು ವ್ಯಾಧಿಗೆ ಪ್ಲಾಸ್ಮಾ ಚಿಕಿತ್ಸೆ ಬಳಸಿಕೊಳ್ಳಬಹುದು ಎಂದು ಹೇಳುವುದಕ್ಕೆ ಸಾಕಷ್ಟು ಸಾಕ್ಷ್ಯಗಳೂ ಇಲ್ಲ. ಅದಕ್ಕೆಂದೇ ಭಾರತೀಯ ವೈದ್ಯಕೀಯ ಸಂಶೋದನಾ ಸಂಸ್ಥೆಯು ಪ್ಲಾಸ್ಮಾ ಥೆರಪಿಯ ಕ್ಷಮತೆ ಬಗ್ಗೆ ರಾಷ್ಟ್ರೀಯ ಮಟ್ಟದ ಅಧ್ಯಯನ ಆರಂಭಿಸಿದೆ. 

ಐಸಿಎಂಆರ್ ಅಧ್ಯಯನ ಪೂರ್ಣಗೊಳ್ಳುವವರೆಗೆ ಹಾಗೂ ಬಲವಾದ ವೈಜ್ಞಾನಿಕ ಪುರಾವೆ ಸಿಗುವವರೆಗೆ, ಪ್ಲಾಸ್ಮಾ ಚಿಕಿತ್ಸೆಯನ್ನು ಕೇವಲ ಪ್ರಾಯೋಗಿಕವಾಗಿ ಹಾಗೂ ಸಂಶೋಧನೆಯ ಉದ್ದೇಶದಿಂದ ಬಳಕೆ ಮಾಡಿಕೊಳ್ಳಬಹುದು ಎಂದು ಕೇಂದ್ರ ಹೇಳಿದೆ. 

ಈ ನಡುವೆ ದೇಶದ ವಿವಿಧೆಗೆ ವೈರಸ್'ಗೆ ಮಂಗಳವಾರ 37 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಕೊರೋನಾಗೆ ಸಾವಿಗೀಡಾದವರ ಸಂಖ್ಯೆ 937ಕ್ಕೇರಿಕೆಯಾಗಿದೆ. ಇದರಂತೆ ದೇಶದಲ್ಲಿ ಸಾವಿನ ಸಂಖ್ಯೆ 1000 ಗಡಿಯತ್ತ ಸಾಗಿದೆ. ಈ ವರೆಗೆ ಕೊರೋನಾ ವೈರಸ್ ಪರೀಕ್ಷೆಗೆ ಒಳಗಾದ ಪ್ರತಿ 25 ಮಂದಿಯಲ್ಲಿ ಸರಾಸರಿ ಒಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com