ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್: 3 ಉಗ್ರರನ್ನು ಸದೆಬಡಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, 3 ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, 3 ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. 
 
ಶೋಪಿಯಾನ್ ಜಿಲ್ಲೆಯ ಜಿಯಾನಾಪೊರಾ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭಾರತೀಯ ಸೇನಾಪಡೆ, ಕಾಶ್ಮೀರ ಪೊಲೀಸರು, 55 ಆರ್ಆರ್ ರಾಷ್ಟ್ರೀಯ ರೈಫಲ್ಸ್, ಸಿಆರ್'ಪಿಎಫ್ ಯೋಧರು ಜಂಟಿಯಾಗಿ ಕಳೆದ ರಾತ್ರಿಯಿಂದಲೂ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದರು. 

ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಕಾರ್ಯಾಚರಣೆಯನ್ನು ಎನ್'ಕೌಂಟರ್ ಆಗಿ ಪರಿವರ್ತಿಸಿರುವ ಸೇನಾಪಡೆ ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ. ಸ್ಥಳದಲ್ಲಿ ಮತ್ತೊಬ್ಬ ಉಗ್ರ ಅಡಗಿಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com