24 ಗಂಟೆಗಳಲ್ಲಿ 71 ಸಾವು, ಭಾರತದಲ್ಲಿ ಸಾವಿನ ಸಂಖ್ಯೆ 1,008ಕ್ಕೆ ಏರಿಕೆ, ಸೋಂಕಿತರ ಸಂಖ್ಯೆ 31,787ಕ್ಕೆ ಏರಿಕೆ

ಭಾರತದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅಂತರದಲ್ಲಿ 71 ಮಂದಿ ವೈರಸ್ ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಭಾರತದಲ್ಲಿ ಕೋವಿಡ್-19ಗೆ ಬಲಿಯಾದವರ ಸಂಖ್ಯೆ 1008ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅಂತರದಲ್ಲಿ 71 ಮಂದಿ ವೈರಸ್ ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಭಾರತದಲ್ಲಿ ಕೋವಿಡ್-19ಗೆ ಬಲಿಯಾದವರ ಸಂಖ್ಯೆ 1008ಕ್ಕೆ ಏರಿಕೆಯಾಗಿದೆ.

ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಸುಮಾರು 1,813 ಮಂದಿಯಲ್ಲಿ ಸೋಂಕು ದೃಢ ಪಟ್ಟಿದ್ದು, ಆ ಮೂಲಕ ಭಾರತದಲ್ಲಿ ವೈರಸ್ ಸೋಂಕಿತರ ಸಂಖ್ಯೆ 31,787ಕ್ಕೆ ಏರಿಕೆಯಾಗಿದೆ. ಈ ಪೈಕಿ 7,796 ಸೋಂಕಿತರು ಗುಣಮುಖರಾಗಿದ್ದು. ಕೊರೋನಾ ವೈರಸ್ ನಿಂದ  ಗುಣಮುಖರಾದವರ ಪ್ರಮಾಣ ಶೇ.24.52ಕ್ಕೆ ಏರಿಕೆಯಾಗಿದೆ. ಅಂತೆಯೇ ವಿವಿಧ ಆಸ್ಪತ್ರೆಗಳಲ್ಲಿ 22,982 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 111 ಮಂದಿ ವಿದೇಶಿಗರು ಕೂಡ ಸೇರಿದ್ದಾರೆ.

ಮಹಾರಾಷ್ಟ್ರದಲ್ಲಿ ಗರಿಷ್ಠ ಸಾವು
ಕಳೆದ 24 ಗಂಟೆಗಳ ಅಂತರದಲ್ಲಿ 71 ಮಂದಿ ವೈರಸ್ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಪೈಕಿ 31 ಮಂದಿ ಮಹಾರಾಷ್ಟ್ರದಲ್ಲಿ ಸಾವನ್ನಪ್ಪಿದ್ದು, ಗುಜರಾತ್ ನಲ್ಲಿ 19, ಮಧ್ಯ ಪ್ರದೇಶದಲ್ಲಿ 6, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ತಲಾ ಐದು, ಪಶ್ಚಿಮ ಬಂಗಾಳದಲ್ಲಿ 2, ಜಮ್ಮು ಮತ್ತು  ಕಾಶ್ಮೀರ, ಪಂಜಾಬ್ ಮತ್ತು ತಮಿಳುನಾಡಿನಲ್ಲಿ ತಲಾ ಒಬ್ಬ ಸೋಂಕಿತ ಸಾವನ್ನಪ್ಪಿದ್ದಾರೆ.

ಉಳಿದಂತೆ ರಾಜ್ಯಾವಾರು ಪಟ್ಟಿ ಇಂತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com