ರಾಜ್ಯಸಭಾ ಸದಸ್ಯ ಅಮರ್‌ ಸಿಂಗ್‌ ನಿಧನ

ಮಾಜಿ ಸಮಾಜವಾದಿ ಪಕ್ಷದ ನಾಯಕ ಮತ್ತು ರಾಜ್ಯಸಭಾ ಸದಸ್ಯ ಅಮರ್‌ ಸಿಂಗ್‌ ಅವರು ದೀರ್ಘಾಕಾಲದ ಅನಾರೋಗ್ಯದ ಕಾರಣದಿಂದ ಸಿಂಗಾಪುರ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.

Published: 01st August 2020 06:08 PM  |   Last Updated: 01st August 2020 07:32 PM   |  A+A-


Amar Singh

ಅಮರ್ ಸಿಂಗ್

Posted By : Vishwanath S
Source : UNI

ನವದೆಹಲಿ: ಮಾಜಿ ಸಮಾಜವಾದಿ ಪಕ್ಷದ ನಾಯಕ ಮತ್ತು ರಾಜ್ಯಸಭಾ ಸದಸ್ಯ ಅಮರ್‌ ಸಿಂಗ್‌ ಅವರು ದೀರ್ಘಾಕಾಲದ ಅನಾರೋಗ್ಯದ ಕಾರಣದಿಂದ ಸಿಂಗಾಪುರ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.

64 ವರ್ಷದ ಅಮರ್‌ ಸಿಂಗ್‌ ತಮ್ಮ ಪತ್ನಿ ಪಂಕಜಾ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಅಮರ್ ಸಿಂಗ್‌ ಅವರು ದೀರ್ಘ ಕಾಲದ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಕೆಲ ಸಮಯದಿಂದ ಸಿಂಗಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 2013ರಲ್ಲಿ ಅವರು ಕಿಡ್ನಿ ವೈಫಲ್ಯಕ್ಕೆ ಗುರಿಯಾಗಿದ್ದರು.

ರಾಷ್ಟ್ರಪತಿ, ಉಪರಾಷ್ಟ್ರಪತಿ ಸಂತಾಪ:
ರಾಜ್ಯಸಭಾ ಸದಸ್ಯ ಅಮರ್‌ ಸಿಂಗ್‌ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಹಾಗೂ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಭಾನುವಾರ ಸಂತಾಪ ಸೂಚಿಸಿದ್ದಾರೆ. 

ರಾಷ್ಟ್ರಪತಿ ಕೋವಿಂದ್‌,"ರಾಜ್ಯಸಭಾ ಸದಸ್ಯ ಅಮರ್‌ ಸಿಂಗ್‌ ಅವರ ನಿಧನ ಸುದ್ದಿ ಕೇಳಿ ಬೇಸರವಾಯಿತು. ಅವರು ಬಹುಆಯಾಮದ ವ್ಯಕ್ತಿತ್ವ ಹೊಂದಿದ್ದರು. ಅವರು ಓರ್ವ ಪ್ರತಿಭಾವಂತ ಸಂಸದರಾಗಿದ್ದರು" ಎಂದರು. 

ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ತಮ್ಮ ಸಂದೇಶದಲ್ಲಿ "ಸಿಂಗ್‌ ಕುಟುಂಬ ಸದಸ್ಯರಿಗೆ ನೋವು ಭರಿವುಸ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆ. ಓಂ ಶಾಂತಿ" ಎಂದು ಹೇಳಿದ್ದಾರೆ.

ರಾಜ್ಯಸಭಾ ಸದಸ್ಯ ಮತ್ತು ಮಾಜಿ ಸಮಾಜವಾದಿ ಪಕ್ಷದ ನಾಯಕ ಅಮರ್‌ ಸಿಂಗ್‌ ತಮ್ಮ 64 ವರ್ಷದಲ್ಲಿ ಸಿಂಗಾಪುರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರು ಕಿಡ್ನಿ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. 

Stay up to date on all the latest ರಾಷ್ಟ್ರೀಯ news
Poll
IPL2020

ಚೀನಾದ ಪ್ರಾಯೋಜಕರೊಂದಿಗಿನ ಒಪ್ಪಂದವನ್ನು ಮುಂದುವರಿಸಿರುವ ಕಾರಣ ಭಾರತೀಯರು ಐಪಿಎಲ್ ಅನ್ನು ಬಹಿಷ್ಕರಿಸಬೇಕೆಂದು ಸ್ವದೇಶಿ ಜಾಗರನ್ ಮಂಚ್ ಹೇಳಿದೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp