ತಮಿಳುನಾಡು: ಒಂದೇ ದಿನ 5,879 ಹೊಸ ಕೊರೋನಾ ಸೋಂಕು ಪ್ರಕರಣಗಳ ದಾಖಲು, 99 ಸಾವು!

ತಮಿಳುನಾಡಿನಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 5,879 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚೆನ್ನೈ: ತಮಿಳುನಾಡಿನಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 5,879 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಹೌದು.. ತಮಿಳುನಾಡಿನಲ್ಲಿ ನಿನ್ನೆ 5,879 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ  ಆ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,51,738ಕ್ಕೆ ಏರಿಕೆಯಾಗಿದೆ. ಈ ಪೈಕಿ 1,90,966ಮಂದಿ ಸೋಂಕಿತರು ಗುಣಮುಖಾಗಿದ್ದು, 60,772 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಅಂತೆಯೇ ನಿನ್ನೆ ತಮಿಳುನಾಡಿನಲ್ಲಿ 99 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಆ ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 4,034 ಕ್ಕೆ ಏರಿಕೆಯಾಗಿದೆ ಎಂದು ತಮಿಳುನಾಡು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com