ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ
ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ

ರಾಮ ಮಂದಿರ ಭೂಮಿಪೂಜೆ ಕಾರ್ಯಕ್ರಮಕ್ಕೆ ಠಾಕ್ರೆ ಗೈರು ಸಾಧ್ಯತೆ

ರಾಮ ಮಂದಿರ ಭೂಮಿಪೂಜೆ ಕಾರ್ಯಕ್ರಮಕ್ಕೆ ಮಹಾರಾಷ್ಟ್ರ ಸಿಎಂ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಗೈರಾಗುವ ಸಾಧ್ಯತೆಗಳು ದಟ್ಟವಾಗಿದೆ. 

ಮುಂಬೈ: ರಾಮ ಮಂದಿರ ಭೂಮಿಪೂಜೆ ಕಾರ್ಯಕ್ರಮಕ್ಕೆ ಮಹಾರಾಷ್ಟ್ರ ಸಿಎಂ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಗೈರಾಗುವ ಸಾಧ್ಯತೆಗಳು  ದಟ್ಟವಾಗಿದೆ. 

ಆ.05 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗುವ ನಿರೀಕ್ಷೆ ಇದೆ. ಅಯೋಧ್ಯೆಯಲ್ಲಿ ಕೋವಿಡ್-19 ಪರಿಸ್ಥಿತಿ ಗಂಭೀರವಾಗಿರುವ ಕಾರಣದಿಂದಾಗಿ ಉದ್ಧವ್ ಠಾಕ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಕಡಿಮೆ ಎಂದು ಶಿವಸೇನೆ ನಾಯಕ ಸಂಜಯ್ ರೌತ್ ಹೇಳಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಮುಖ್ಯ. ಮುಖ್ಯಮಂತ್ರಿಯಾಗಿರುವ ಉದ್ಧವ್ ಠಾಕ್ರೆ ಯಾವಾಗ ಬೇಕಾದರೂ ಅಯೋಧ್ಯೆಗೆ ಭೇಟಿ ನೀಡಬಹುದು ಎಂದು ಹೇಳಿರುವ ಸಂಜಯ್ ರೌತ್ ಶಿವಸೇನೆ ಪಕ್ಷ 1 ಕೋಟಿ ರೂಪಾಯಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿರುವುದನ್ನು ತಿಳಿಸಿದ್ದಾರೆ. 

ಭೂಮಿ ಪೂಜೆ ಕಾರ್ಯಕ್ರಮಕ್ಕೆ ಆದಷ್ಟೂ ಕಡಿಮೆ ಜನರು ಹೋಗುವು ಉತ್ತಮ ಎಂದು ಸಂಜಯ್ ರೌತ್ ಹೇಳಿದ್ದಾರೆ. ಉದ್ಧವ್ ಠಾಕ್ರೆ ಅವರಿಗೆ ಆಹ್ವಾನ ಬಂದಿತ್ತೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು ಯಾರೂ ಆಹ್ವಾನಕ್ಕಾಗಿ ಕಾಯುತ್ತಿಲ್ಲ ಎಂದು ತಿಳಿಸಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com