ಹಿರಿಯ ನಾಗರೀಕರಿಗೆ ಸಕಾಲಕ್ಕೆ ಪಿಂಚಣಿ, ಅಗತ್ಯ ವಸ್ತುಗಳು ತಲುಪುವಂತೆ ನೋಡಿಕೊಳ್ಳಿ: ಕೇಂದ್ರ, ರಾಜ್ಯಗಳಿಗೆ 'ಸುಪ್ರೀಂ' ಸೂಚನೆ

ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ನಾಗರೀಕರಿಗೆ ಸಕಾಲಕ್ಕೆ ಪಿಂಚಣಿ ತಲುವಂತೆ ಹಾಗೂ ಒಂಟಿಯಾಗಿರುವ ಹಿರಿಯ ನಾಗರೀಕರಿಗೆ ಅಗತ್ಯ ವಸ್ತುಗಳನ್ನು ತಲುಪುವಂತೆ ನೋಡಿಕೊಳ್ಳಿ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಮಂಗಳವಾರ ಸೂಚನೆ ನೀಡಿದೆ. 

Published: 04th August 2020 01:27 PM  |   Last Updated: 04th August 2020 01:59 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ನವದೆಹಲಿ: ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ನಾಗರೀಕರಿಗೆ ಸಕಾಲಕ್ಕೆ ಪಿಂಚಣಿ ತಲುವಂತೆ ಹಾಗೂ ಒಂಟಿಯಾಗಿರುವ ಹಿರಿಯ ನಾಗರೀಕರಿಗೆ ಅಗತ್ಯ ವಸ್ತುಗಳನ್ನು ತಲುಪುವಂತೆ ನೋಡಿಕೊಳ್ಳಿ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಮಂಗಳವಾರ ಸೂಚನೆ ನೀಡಿದೆ. 

ಕೊರೋನಾ ಸಾಂಕ್ರಾಮಿಕ ರೋಗ ಸಂದರ್ಭದಲ್ಲಿ ಹಿರಿಯ ನಾಗರೀಕರ ಸಂಕಷ್ಟಗಳ ಕುರಿತಂತೆ ಕೇಂದ್ರದ ಮಾಜಿ ಕಾನೂನು ಸಚಿವೆ ಅಶ್ವಿನಿ ಕುಮಾರ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠ ವಿಚಾರಣೆ ನಡೆಸಿತು. 

ವಿಚಾರಣೆ ವೇಳೆ ಅರ್ಜಿದಾರರು ಮಾತನಾಡಿ, ಕೊರೋನಾ ಸಂದರ್ಭದಲ್ಲಿ ಹಿರಿಯ ನಾಗರೀಕರಿಗೆ ಆಹಾರ, ನೀರು, ಔಷಧಿ, ಮಾಸ್ಕ್ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸಬೇಕು, ಪ್ರಮುಖವಾಗಿ ಒಂಟಿಯಾಗಿರುವ ಹಿರಿಯರಿಗೆ ಸೌಲಭ್ಯಗಳು ತಲುಪುವಂತೆ ನೋಡಿಕೊಳ್ಳಬೇಕೆಂದು ಹೇಳಿದರು. 

ವಿಚಾರಣೆ ವೇಳೆ ಪ್ರತಿಕ್ರಿಯೆ ನೀಡಿರುವ ನ್ಯಾಯಪೀಠ, ಹಿರಿಯ ನಾಗರೀಕರ ಸಮಸ್ಯೆ ಸಂಬಂಧ ರಾಜ್ಯ ಸರ್ಕಾರಗಳು ತ್ವರಿತಗತಿಯಲ್ಲಿ ಸ್ಪಂದನೆ ನೀಡಬೇಕು. ಹಿರಿಯ ನಾಗರೀಕರಿಗೆ ಸೂಕ್ತ ಸಮಯಕ್ಕೆ ಪಿಂಚಣಿ, ಅಗತ್ಯವಸ್ತುಗಳನ್ನು ಪೂರೈಸಬೇಕೆಂದು ಸೂಚಿಸಿದೆ. 

ಅಲ್ಲದೆ, ವೃದ್ಧಾಶ್ರಮಗಳಲ್ಲಿ ಹಿರಿಯ ನಾಗರೀಕರನ್ನು ನೋಡಿಕೊಳ್ಳುವವರಿಗೆ ಉತ್ತಮ ಗುಣಮುಟ್ಟದ ಮಾಸ್ಕ್'ಗಳು, ಪಿಪಿಇ ಕಿಟ್ ಗಳು ಹಾಗೂ ಸ್ಯಾನಿಟೈಸರ್ ಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. 

Stay up to date on all the latest ರಾಷ್ಟ್ರೀಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp