ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ: ಸಿಪಿಎಂ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ರಂದು ನಡೆಯುವ ಭೂಮಿ ಪೂಜೆ ಸಮಾರಂಭದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯಾಡಳಿತ ಪಾಲ್ಗೊಳ್ಳುವುದು ಸಂವಿಧಾನದ ಉಲ್ಲಂಘನೆಯಲ್ಲದೆ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧದ ನಡೆಯಾಗಲಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ (ಸಿಪಿಎಂ) ಸೋಮವಾರ ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ರಂದು ನಡೆಯುವ ಭೂಮಿ ಪೂಜೆ ಸಮಾರಂಭದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯಾಡಳಿತ ಪಾಲ್ಗೊಳ್ಳುವುದು ಸಂವಿಧಾನದ ಉಲ್ಲಂಘನೆಯಲ್ಲದೆ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧದ ನಡೆಯಾಗಲಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ (ಸಿಪಿಎಂ) ಸೋಮವಾರ ಹೇಳಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ದೇವಾಲಯದ ನಿರ್ಮಾಣವು ಟ್ರಸ್ಟ್ ನಿಂದ ಆಗಬೇಕೆಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಆದ್ದರಿಂದ, ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಂತಹ ಸರ್ಕಾರದ ಉನ್ನತ ಸ್ಥಾನದ ವ್ಯಕ್ತಿಗಳು ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದ ತತ್ವಕ್ಕೆ ವಿರುದ್ಧವಾಗಲಿದೆ ಎಂದು ಸಿಪಿಐ (ಎಂ) ಪಾಲಿಟ್‍ ಬ್ಯೂರೋ ಇಲ್ಲಿ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಹೇಳಲಾಗಿದೆ.

1992 ರ ಡಿಸೆಂಬರ್ 6 ರಂದು ನಡೆದ ಬಾಬರಿ ಮಸೀದಿ ಧ್ವಂಸ ಘಟನೆಯನ್ನು ಅಪರಾಧ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಹೇಳಿದ್ದರೂ, ಕೇಂದ್ರ ಸರ್ಕಾರ ಈವರೆಗೆ ಅಪರಾಧಿಗಳಿಗೆ ಶಿಕ್ಷೆ ನೀಡುವ ಬದಲು ಧ್ವಂಸಕ್ಕೆ ಕಾನೂನು ಪಾವಿತ್ರ್ಯತೆ ನೀಡುವಂತೆ ವರ್ತಿಸಿದೆ ಎಂದು ಸಿಪಿಎಂ ವಿಷಾಧಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com