ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 6,61,182 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್

ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 6,61,182 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಂಗಳವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 6,61,182 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಂಗಳವಾರ ಮಾಹಿತಿ ನೀಡಿದೆ. 

ನಿನ್ನೆ ಒಂದೇ ದಿನ ದೇಶಾದ್ಯಂತ 6,61,182 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಆಗಸ್ಟ್ 3ರವರೆಗೂ 2,08,64,750 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ದೇಶದಾದ್ಯಂತ ತೀವ್ರ ಸ್ವರೂಪದಲ್ಲಿ ರೋಗಪತ್ತೆ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಈ ಮೂಲಕ ಈವರೆಗೆ ದೇಶದಾದ್ಯಂತ 2 ಕೋಟಿಗಿಂತ ಹೆಚ್ಚು ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ. ಹತ್ತು ಲಕ್ಷ ಮಂದಿಗೆ ಸರಾಸರಿ 14,640 ಸೋಂಕು ಪತ್ತೆ ಪರೀಕ್ಷೆ ನಡೆಸಲಾಗುತ್ತಿದೆ. ಕರ್ನಾಟಕವೂ ಸೇರಿ 24 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷೆ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com