ಕೋವಿಡ್-19: ದೇಶದಲ್ಲಿ ಒಂದೇ ದಿನ 52,509 ಕೇಸ್, ಸೋಂಕಿತರ ಸಂಖ್ಯೆ 19 ಲಕ್ಷ, 39,795 ಮಂದಿ ಸಾವು

ದೇಶದಲ್ಲಿ ಒಂದೇ ದಿನ 52,509 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 19,08,255ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿ ಒಂದೇ ದಿನ 52,509 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 19,08,255ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ ಮಹಾಮಾರಿ ವೈರಸ್ 857 ಮಂದಿಯನನು ಬಲಿ ಪಡೆದುಕೊಂಡಿದ್ದು, ಇದರೊಂದಿಗೆ ಸಾವನ್ನಪ್ಪಿದವರ ಸಂಖ್ಯೆ 39,795ಕ್ಕೆ ಏರಿಕೆಯಾಗಿದೆ. 

ಜೊತೆಗೆ 19,08,255 ಮಂದಿ ಸೋಂಕಿತರ ಪೈಕಿ ಈ ವರೆಗೂ 12,82,216 ಮಂದಿ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 5,86,244 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

ಇನ್ನು ರಾಜ್ಯವಾರು ಸೋಂಕಿತರ ಸಂಖ್ಯೆಗೆ ಬಂದರೆ, ಆಂಧ್ರಕಪ್ರದೇಶದಲ್ಲಿ ನಿನ್ನೆ ಇತರೆ ರಾಜ್ಯಗಳಿಗಿಂತ ಅತೀ ಹೆಚ್ಚು ಮಂದಿಗೆ ಅಂದರೆ 9747 ಮಂದಿಯಲ್ಲಿ ಕೊರೋನಾ ದೃಢಪಟ್ಟಿದ್ದು, 67 ಮಂದಿ ಸಾವನ್ನಪ್ಪಿದ್ದಾರೆ. 

ಇನ್ನು ಮಹಾರಾಷ್ಟ್ರದಲ್ಲಿ 7760 ಮಂದಿಗೆ ಹೊಸದಾಗಿ ಕೊರೋನಾ ಸೋಂಕು (300 ಬಲಿ), ಕರ್ನಾಟಕ 6259 ಹೊಸ ಕೇಸ್ (100 ಸಾವು), ತಮಿಳುನಾಡು 5063 ಕೇಸ್ (108 ಸಾವು), ಉತ್ತರಪ್ರದೇಶ 2948 ಸೋಂಕು (39 ಸಾವು), ಪಶ್ಚಿಮ ಬಂಗಾಳದಲ್ಲಿ 2752 ಸೋಂಕು ಹಾಗೂ 57 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com