ಬೈರೂತ್ ಸ್ಫೋಟ: ಪ್ರಧಾನಿ ಮೋದಿ ತೀವ್ರ ಸಂತಾಪ

ಲೆಬನಾನ್ ರಾಜಧಾನಿ ಬೈರೂತ್ ನಲ್ಲಿ ಮಂಗಳವಾರ ಸಂಭವಿಸಿದ ಭಾರೀ ಪ್ರಮಾಣದ ಅವಳಿ ಸ್ಫೋಟದಲ್ಲಿ 78ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. 
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಲೆಬನಾನ್ ರಾಜಧಾನಿ ಬೈರೂತ್ ನಲ್ಲಿ ಮಂಗಳವಾರ ಸಂಭವಿಸಿದ ಭಾರೀ ಪ್ರಮಾಣದ ಅವಳಿ ಸ್ಫೋಟದಲ್ಲಿ 78ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. 

ಸ್ಫೋಟ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಬೈರೂತ್ ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಸುದ್ದಿ ಕೇಳಿ ಆಘಾತ ಹಾಗೂ ಬೇಸರವಾಯಿತು. ಸ್ಫೋಟದಲ್ಲಿ ಸಾಕಷ್ಟು ಸಾವು-ನೋವುಗಳು ಸಂಭವಿಸಿದ್ದು, ಭಾರೀ ಪ್ರಮಾಣದ ಆಸ್ತಿಪಾಸ್ತಿಗಳು ನಾಶಗೊಂಡಿವೆ. ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆಂದು ಹೇಳಿದ್ದಾರೆ. 

ಬೈರೂತ್ ನಲ್ಲಿ ಮಂಗಳವಾರ ಭಾರೀ ಪ್ರಮಾಣದ ಅವಳಿ ಸ್ಫೋಟ ಸಂಭವಿಸಿದ್ದು. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಹಲವು ಕಟ್ಟಡಗಳು ಧ್ವಂಸಗೊಂಡಿದ್ದು, ಸಾವಿರಾರು ಕಟ್ಟಡಗಳು ಭಾರೀ ಹಾನಿಗೊಳಗಾಗಿದೆ. 

ಸ್ಫೋಟಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಪ್ರಾಥಮಿಕ ವರದಿಗಳ ಅನ್ವಯ ಸ್ಫೋಟದಲ್ಲಿ 78ಕ್ಕೂ ಮಂದಿ ಬಲಿಯಾಗಿದ್ದು, 4 ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com