ಕರ್ನಾಟಕ ಸೇರಿದಂತೆ 22 ರಾಜ್ಯಗಳಿಗೆ ಕೇಂದ್ರದಿಂದ 2ನೇ ಹಂತದ ಕೊರೋನಾ ಪರಿಹಾರ ಪ್ಯಾಕೇಜ್ ಬಿಡುಗಡೆ

ಕರ್ನಾಟಕ ಸೇರಿದಂತೆ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 890. 32 ಕೋಟಿ ರೂ. ಮೊತ್ತದ ಎರಡನೇ ಹಂತದ ಕೋವಿಡ್-19 ತುರ್ತು ಪರಿಹಾರದ ಪ್ಯಾಕೇಜ್ ನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ:  ಕರ್ನಾಟಕ ಸೇರಿದಂತೆ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 890. 32 ಕೋಟಿ ರೂ. ಮೊತ್ತದ ಎರಡನೇ ಹಂತದ ಕೋವಿಡ್-19 ತುರ್ತು ಪರಿಹಾರದ ಪ್ಯಾಕೇಜ್ ನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಕೋವಿಡ್-19 ಕೇಸ್ ಗಳ ಆಧಾರದ ಮೇಲೆ ಹಣಕಾಸಿನ ನೆರವನ್ನು ಪ್ರತಿಯೊಂದು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಬಿಡುಗಡೆ ಮಾಡಲಾಗಿದೆ.

ಛತ್ತೀಸ್ ಗಢ, ಜಾರ್ಖಂಡ್, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ತೆಲಂಗಾಣ, ಆಂಧ್ರ ಪ್ರದೇಶ, ಗೋವಾ, ಗುಜರಾತ್, ಕರ್ನಾಟಕ, ಕೇರಳ, ಪಂಜಾಬ್, ತಮಿಳುನಾಡು, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಮಣಿಪುರ, ಮೀಜೋರಾಂ ಮತ್ತು ಸಿಕ್ಕಿಂ ರಾಜ್ಯಗಳಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಕೋವಿಡ್- 19 ನಿರ್ವಹಣೆಗಾಗಿ ಪ್ರಧಾನಿ ನರೇಂದ್ರ ಮೋದಿ 15 ಸಾವಿರ ಕೋಟಿ ಮೊತ್ತದ ಪ್ಯಾಕೇಜ್ ನ್ನು ಘೋಷಿಸಿದ್ದಾರೆ.  ಆರ್ ಟಿ- ಪಿಸಿಆರ್ ಯಂತ್ರೋಪಕರಣಗಳು ಅಳವಡಿಕೆ, ಸಿಬಿ-ನ್ಯಾಟ್ ಯಂತ್ರಗಳು, ಆರ್ ಎನ್ ಎ ಕಿಟ್ಸ್ ಗಳು, ಐಸಿಯು ಹಾಸಿಗೆಗಳ ಅಭಿವೃದ್ಧಿ, ಅಕ್ಸಿಜನ್ ಪೂರಿತ ಬೆಡ್ ಗಳು ಸೇರಿದಂತೆ ಕೋವಿಡ್-19 ಪರೀಕ್ಷೆಯಲ್ಲಿ ಸಾರ್ವಜನಿಕ ಆರೋಗ್ಯ ಮೂಲಸೌಕರ್ಯವನ್ನು ಸದೃಢಗೊಳಿಸಲು ಎರಡನೇ ಹಂತದ ಆರ್ಥಿಕ ನೆರವನ್ನು ಬಳಸಿಕೊಳ್ಳಬಹುದಾಗಿದೆ.

ಅಗತ್ಯವಿರುವ ಮಾನವ ಸಂಪನ್ಮೂಲ ನಿರ್ವಹಣೆ, ತರಬೇತಿ, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಕರು ಆರೋಗ್ಯ ಸಿಬ್ಬಂದಿಯ ಗೌರವಧನಕ್ಕೂ ಈ ಹಣವನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.ಮೊದಲ ಹಂತದಲ್ಲಿ ಏಪ್ರಿಲ್ ನಲ್ಲಿ 3 ಸಾವಿರ ಕೋಟಿ ರೂಪಾಯಿ ಮೊತ್ತದ ಪ್ಯಾಕೇಜ್ ನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com