ಹೊಟ್ಟೆ ನೋವು: ಸಮಾಜವಾದಿ ಪಕ್ಷ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು 

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಲಖನೌನ ಮೆದಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುಪಿ ಮೈನ್‌ಪುರಿಯ ಲೋಕಸಭಾ ಸಂಸದ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸ್ಥಾಪಕ ಯಾದವ್ ಅವರನ್ನು ಗುರುವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ
ಮುಲಾಯಂ ಸಿಂಗ್ ಯಾದವ್
ಮುಲಾಯಂ ಸಿಂಗ್ ಯಾದವ್

ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಲಖನೌನ ಮೆದಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುಪಿ ಮೈನ್‌ಪುರಿಯ ಲೋಕಸಭಾ ಸಂಸದ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸ್ಥಾಪಕ ಯಾದವ್ ಅವರನ್ನು ಗುರುವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಉದರ ಸಂಬಂಧಿ ತೊಂದರೆಗಳಿಗೆ ಚಿಕಿತ್ಸೆಪಡೆಯುವ ಸಲುವಾಗಿ ಯಾದವ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಹೇಳಿದೆ.

ಮುಲಾಯಂ ಸಿಂಗ್ ಯಾದವ್ ಅವರನ್ನು ಈ ವರ್ಷದ ಆರಂಭದಲ್ಲಿಸಹ ಮೇದಾಂತ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿಗಿತ್ತು. ಇದೀಗ ಎರಡನೇ ಬಾರಿಗೆ ಯಾದವ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಾದವ್ ವಾಡಿಕೆಯ ತಪಾಸಣೆಗಾಗಿ ಹೋಗಿದ್ದರು ಮತ್ತು ಚಿಕಿತ್ಸೆಯನ್ನು ಪಡೆಯಲು ವೈದ್ಯರು ಸಲಹೆ ನೀಡಿದ್ದರು ಎಂದು ಎಸ್ಪಿಪಕ್ಷದ ಮುಖಂಡರು ಸುದ್ದಿ ಸಂಸ್ಥೆಗಳಿಗೆ ತಿಳಿದ್ದಾರೆ. 

ಯಾದವ್ ಅವರು ಹೊಟ್ಟೆ ನೋವಿನ ಕಾರಣ  ಕಳೆದ ವರ್ಷದ ಡಿಸೆಂಬರ್‌ನಲ್ಲಿ ಮುಂಬೈನ ಖಾಸಗಿ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ಮೂರು ದಿನಗಳ ನಂತರ ಡಿಸ್ಚಾರ್ಜ್ ಮಾಡಲಾಗಿತ್ತು, 

ಯಾದವ್  1989 ರಿಂದ 1991, 1993-1995 ಹಾಗೂ 2003-2007  ಮೂರು ಅವಧಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಮಗ ಅಖಿಲೇಶ್ ಯಾದವ್ 2012ರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com