ಕಾಂಗ್ರೆಸ್-ಚೀನಾ ನಡುವೆ ಒಪ್ಪಂದ ವಿಚಾರ: ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್!

‘ಕಾಂಗ್ರೆಸ್‌ ಹಾಗೂ ಚೀನಾದ ಕಮ್ಯುನಿಸ್ಟ್‌ ಪಕ್ಷದ (ಸಿಪಿಸಿ) ಮಧ್ಯೆ 2008ರಲ್ಲಿ ನಡೆದಿದೆ ಎನ್ನಲಾದ ಒಪ್ಪಂದದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು’ ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನುಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ‘ಕಾಂಗ್ರೆಸ್‌ ಹಾಗೂ ಚೀನಾದ ಕಮ್ಯುನಿಸ್ಟ್‌ ಪಕ್ಷದ (ಸಿಪಿಸಿ) ಮಧ್ಯೆ 2008ರಲ್ಲಿ ನಡೆದಿದೆ ಎನ್ನಲಾದ ಒಪ್ಪಂದದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು’ ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನುಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಕಾಂಗ್ರೆಸ್‌ ಹಾಗೂ ಚೀನಾದ ಕಮ್ಯುನಿಸ್ಟ್‌ ಪಕ್ಷದ (ಸಿಪಿಸಿ) ಮಧ್ಯೆ 2008ರಲ್ಲಿ ನಡೆದಿದೆ ಎನ್ನಲಾದ ಒಪ್ಪಂದದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು’ ಎಂದು ಕೋರಿ ವಕೀಲ ಶಶಾಂಕ್‌ ಶೇಖರ್ ಝಾ ಹಾಗೂ ಪತ್ರಕರ್ತ ಸಾವಿಯೊ ರೋಡ್ರಿಗಸ್‌ ಎಂಬುವವರು ಈ ಅರ್ಜಿ ಸಲ್ಲಿಸಿದ್ದರು. ಅಲ್ಲದೆ ‘ಒಪ್ಪಂದದ ವಿವರಗಳನ್ನು ಬಹಿರಂಗಪಡಿಸದಿರುವುದು ನಾಗರಿಕರ ಬದುಕುವ ಹಕ್ಕಿನ ಉಲ್ಲಂಘನೆಯಾಗಿದೆ’ ಎಂದು ಹೇಳಿದ್ದರು.

ಇದೀಗ ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬಾಬ್ಡೇ ಅವರು, ರಾಜಕೀಯ ಪಕ್ಷವೊಂದು ದೇಶವೊಂದರ ಜೊತೆ ಹೇಗೆ ಒಪ್ಪಂದ ಮಾಡಿಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿದೆ. ಅಲ್ಲದೆ ತಮ್ಮ ಅರ್ಜಿ ಸಂಬಂಧ ಹೈಕೋರ್ಟ್ ಸಂಪರ್ಕಿಸುವಂತೆ ಸಲಹೆ ನೀಡಿದ್ದು, ಹೈಕೋರ್ಟ್ ನ ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರ ದ್ವಿಸದಸ್ಯ ಪೀಠ ವಿಚಾರಣೆ ನಡೆಸಲಿದೆ ಎಂದು ವಿಡಿಯೋ ಕಾನ್ಫರೆನ್ಸಿಂಗ್ ವಿಚಾರಣೆಯಲ್ಲಿ ಹೇಳಿದರು.

'ನಾವು ಈ ವರೆಗೂ ಕೇಳಿರದ ಗಂಭೀರ ಆರೋಪವನ್ನು ಹೇರಲಾಗಿದೆ. ಚೀನಾದೇಶ ಸರ್ಕಾರವನ್ನು ಹೊರತು ಪಡಿಸಿ ರಾಜಕೀಯ ಪಕ್ಷದೊಂದಿಗೆ ಹೇಗೆ ಒಪ್ಪಂದ ಮಾಡಿಕೊಳ್ಳಲು ಸಾಧ್ಯ. ಇದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಗಂಭೀರ ವಿಚಾರವಾಗಿದೆ. ಒಂದು ವೇಳೆ ಅರ್ಜಿಯಲ್ಲಿ ನೀವು ಆರೋಪಿಸಿರುವ ಯಾವುದೇ ಅಂಶ ಸುಳ್ಳಾದರೆ ನಿಮ್ಮನ್ನು ವಿಚಾರಣೆಗೊಳಪಡಿಸುತ್ತೇವೆ. ನಮ್ಮ ಅನುಭವದಲ್ಲಿ ಹೇಳುವುದಾದರೆ ನಾವು ಎಂದೂ ರಾಜಕೀಯ ಪಕ್ಷವೊಂದು ದೇಶದೊಂದಿಗೆ ಒಪ್ಪಂದ ಮಾಡಿಕೊಂಡ ಕುರಿತು ಎಂದೂ ಕೇಳಿಲ್ಲ  ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇನ್ನು ಈ ಸಂಬಂಧ ವಾದ ಮಂಡಿಸಿದ್ದ ಜೇಠ್ಮಲಾನಿ ಅವರು, ಈ ಕುರಿತ ಯಾವುದೇ ರೀತಿಯ ಅಂಶ ಹೊರ ಬಿದ್ದರೂ ಅದು ಎನ್ ಐಎ ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಬರುತ್ತದೆ. ಇದೊಂದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಚಾರವಾಗಿದ್ದು ಹೀಗಾಗಿ ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಡೆಸಬೇಕು ಎಂದು ಹೇಳಿದ್ದರು. ಆದರೆ ಸುಪ್ರೀಂ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ. 

ಅರ್ಜಿಯಲ್ಲಿ ಏನಿತ್ತು?
 ಕಾಂಗ್ರೆಸ್‌ ಹಾಗೂ ಚೀನಾದ ಕಮ್ಯುನಿಸ್ಟ್‌ ಪಕ್ಷದ (ಸಿಪಿಸಿ) ಮಧ್ಯೆ 2008ರಲ್ಲಿ ನಡೆದಿದೆ ಎನ್ನಲಾದ ಒಪ್ಪಂದದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು’ ಎಂದು ಕೋರಿ  ವಕೀಲ ಶಶಾಂಕ್‌ ಶೇಖರ್ ಝಾ ಹಾಗೂ ಪತ್ರಕರ್ತ ಸಾವಿಯೊ ರೋಡ್ರಿಗಸ್‌ ಎಂಬುವವರು ಈ ಅರ್ಜಿ ಸಲ್ಲಿಸಿದ್ದರು. ಕಾಂಗ್ರೆಸ್ ಮತ್ತು ಚೀನಾದ ಕಮ್ಯುನಿಸ್ಟ್‌ ಪಕ್ಷದ (ಸಿಪಿಸಿ) ಪಕ್ಷಗಳ ನಡುವೆ ಉನ್ನತಮಟ್ಟದ ಮಾಹಿತಿ ಮತ್ತು ಸಹಕಾರ ವಿನಿಮಯದ ಈ ಒಪ್ಪಂದಕ್ಕೆ, 2008ರ ಆಗಸ್ಟ್‌ 7ರಂದು ಸಹಿ ಮಾಡಲಾಗಿತ್ತು. ದ್ವಿಪಕ್ಷೀಯ, ಪ್ರಾದೇಶಿಕ ಹಾಗೂ ಅಂತರರಾಷ್ಟ್ರೀಯ ಪ್ರಮುಖ ಬೆಳವಣಿಗೆಗಳ ಬಗ್ಗೆ ಪರಸ್ಪರ ಸಮಾಲೋಚನೆ ನಡೆಸುವ ವಿಚಾರವೂ ಈ ಒಪ್ಪಂದದಲ್ಲಿ ಇದೆ. ಒಪ್ಪಂದದ ವಿಚಾರದಲ್ಲಿ ಇನ್ನಷ್ಟು ಸ್ಪಷ್ಟತೆ ಹಾಗೂ ಪಾರದರ್ಶಕತೆ ಬೇಕಾಗಿದೆ’ ಎಂದು ಆರೋಪಿಸಲಾಗಿತ್ತು.

2008ರಿಂದ 2013ರವರೆಗಿನ ಅವಧಿಯಲ್ಲಿ ಚೀನಾ ಗಡಿಯಲ್ಲಿ 600ಕ್ಕೂ ಹೆಚ್ಚು ಸಂಘರ್ಷಗಳು ನಡೆದಿವೆ ಎಂಬ ಮಾಧ್ಯಮ ವರದಿಯನ್ನು ಉಲ್ಲೇಖಿಸಿರುವ ಅರ್ಜಿದಾರರು, ಸೋನಿಯಾ ಮತ್ತು ರಾಹುಲ್‌ ಗಾಂಧಿ, ಕಾಂಗ್ರೆಸ್‌ ಪಕ್ಷ ಹಾಗೂ ಕೇಂದ್ರ ಸರ್ಕಾರವನ್ನು ಪ್ರತಿವಾದಿಗಳನ್ನಾಗಿ ಹೆಸರಿಸಿದ್ದರು. ‘ಚೀನಾದೊಂದಿಗೆ ಭಾರತದ ಸಂಬಂಧ ಚೆನ್ನಾಗಿಲ್ಲದಿದ್ದರೂ ಸೋನಿಯಾ ಅವರು, ಆ ದೇಶದ ಜತೆಗೆ ಒಪ್ಪಂದ ಮಾಡಿಕೊಂಡು ಅದರ ವಿವರಗಳನ್ನು ಮುಚ್ಚಿಟ್ಟಿದ್ದರು. ತನ್ನ ಆಡಳಿತಾವಧಿಯಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಮಾಡಿದ್ದ ಪಕ್ಷವೇ ರಾಷ್ಟ್ರೀಯ ಮಹತ್ವದ ಈ ವಿಚಾರದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವಲ್ಲಿ ವಿಫಲವಾಗಿದೆ’ ಎಂದು ಹೇಳಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com