160 ಮಿಲಿಯನ್ ಜನರಿಂದ ರಾಮ ಮಂದಿರ ಭೂಮಿ ಪೂಜೆ ನೇರಪ್ರಸಾರ ವೀಕ್ಷಣೆ: ಪ್ರಸಾರ ಭಾರತಿ

ಇದೇ ಆಗಸ್ಟ್ 5ರಂದು ಆಯೋಧ್ಯೆಯಲ್ಲಿ ನಡೆದ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದ ನೇರಪ್ರಸಾರವನ್ನು ದೇಶಾದ್ಯಂತ ಸುಮಾರು 160 ಮಿಲಿಯನ್ ಗೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ ಎಂದು ಪ್ರಸಾರ ಭಾರತಿ ಮಾಹಿತಿ ನೀಡಿದೆ.

Published: 08th August 2020 03:47 PM  |   Last Updated: 08th August 2020 04:21 PM   |  A+A-


Over 160 million watched live telecast of Ram temple event

ಕಾರ್ಯಕ್ರಮ ವೀಕ್ಷಣೆ ಮಾಡಿದ ಪ್ರಧಾನಿ ಮೋದಿ ತಾಯಿ ಹೀರಾಬೆನ್

Posted By : Srinivasamurthy VN
Source : PTI

ನವದೆಹೆಲಿ: ಇದೇ ಆಗಸ್ಟ್ 5ರಂದು ಆಯೋಧ್ಯೆಯಲ್ಲಿ ನಡೆದ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದ ನೇರಪ್ರಸಾರವನ್ನು ದೇಶಾದ್ಯಂತ ಸುಮಾರು 160 ಮಿಲಿಯನ್ ಗೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ ಎಂದು ಪ್ರಸಾರ ಭಾರತಿ ಮಾಹಿತಿ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಪ್ರಸಾರ್ ಭಾರತಿ ಸಿಇಒ ಶಶಿ ಎಸ್ ವೆಂಪತಿ ಅವರು ಆಗಸ್ಟ್ 5ರಂದು ನಡೆದ ಅಯೋಧ್ಯೆ ರಾಮಮಂದಿರ ಭೂಮಿ ಪೂಜೆ ಕಾರ್ಯಕ್ರಮವನ್ನು ದೇಶಾದ್ಯಂತ ಸುಮಾರು 16 ಕೋಟಿಗೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ.  

ಈ ಬಗ್ಗೆ ಟ್ವಿಟರ್ ನಲ್ಿ ಅವರು ಮಾಹಿತಿ ನೀಡಿದ್ದು, ಆಗಸ್ಟ್ 5ರಂದು ಬೆಳಗ್ಗೆ 10.45ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಈ ಕಾರ್ಯಕ್ರಮವನ್ನು ದೇಶದ ಸುಮಾರು 200 ಚಾನೆಲ್ ಗಳು ನೇರ ಪ್ರಸಾರ ಮಾಡಿದ್ದವು. ಈ ಕಾರ್ಯಕ್ರಮವನ್ನು ದೇಶಾದ್ಯಂತ ಸುಮಾರು 16 ಕೋಟಿಗೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ ಎಂದು ಹೇಳಿದ್ದಾರೆ. 

ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂತ್ರಘೋಷಗಳ ನಡುವೆ ಬೆಳ್ಳಿ ಇಟ್ಟಿಗೆಗಳಿಗೆ ಪೂಜೆ ಮಾಡುವ ಮೂಲಕ ಶಿಲಾನ್ಯಾಸ ನೆರವೇರಿಸಿದ್ದರು.

Stay up to date on all the latest ರಾಷ್ಟ್ರೀಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp