ಪೊಲೀಸ್ ಗಸ್ತು ವಾಹನಕ್ಕೆ ಕಾರು ಡಿಕ್ಕಿ: ಓರ್ವ ಪೊಲೀಸ್ ಸಾವು, ಮತೊಬ್ಬರಿಗೆ ಗಂಭೀರ ಗಾಯ

ಪೊಲೀಸ್ ಗಸ್ತು ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಸಾವಿಗೀಡಾಗಿ, ಮತ್ತೋರ್ವರುಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಳೆದ ರಾತ್ರಿ ನಡೆದಿದೆ.
ಕಾರು ಅಪಘಾತದ ಚಿತ್ರ
ಕಾರು ಅಪಘಾತದ ಚಿತ್ರ

ನವದೆಹಲಿ: ಪೊಲೀಸ್ ಗಸ್ತು ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಸಾವಿಗೀಡಾಗಿ, ಮತ್ತೋರ್ವರು
ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಳೆದ ರಾತ್ರಿ ನಡೆದಿದೆ.

ಖಾಲ್ಸಾ ಬಳಿ ಕಳೆದ ರಾತ್ರಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಕಾರು, ಪೊಲೀಸ್ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದಿರುವುದಾಗಿ
ಪೊಲೀಸರು ತಿಳಿಸಿದ್ದಾರೆ.

ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಪೊಲೀಸ್ ಗಸ್ತು ವಾಹನ ಜಖಂಗೊಂಡಿದೆ.ಕಾರು ಚಾಲಕ ಮದ್ಯದ ನಶೆಯಲ್ಲಿರುವುದು ಕಂಡುಬಂದಿದ್ದು, ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರ ದೆಹಲಿ ಡಿಸಿಪಿ ಮೊನಿಕಾ ಭಾರದ್ವಾಜ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com