ಜಮ್ಮು-ಕಾಶ್ಮೀರದ 2 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ 4ಜಿ ಇಂಟರ್ನೆಟ್ ಸೇವೆಗೆ ಕೇಂದ್ರ ಅವಕಾಶ

ಜಮ್ಮು ಮತ್ತು ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ ಆಗಸ್ಟ್ 15 ಬಳಿಕ ಪ್ರಾಯೋಗಿಕ ಆಧಾರದ ಮೇಲೆ 4ಜಿ ಇಂಟರ್ನೆಟ್ ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದು ಸುಪ್ರೀಂಕೋರ್ಟ್'ಗೆ ಕೇಂದ್ರ ಸರ್ಕಾರದ ವಿಶೇಷ ಸಮಿತಿ ಮಂಗಳವಾರ ತಿಳಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ ಆಗಸ್ಟ್ 15 ಬಳಿಕ ಪ್ರಾಯೋಗಿಕ ಆಧಾರದ ಮೇಲೆ 4ಜಿ ಇಂಟರ್ನೆಟ್ ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದು ಸುಪ್ರೀಂಕೋರ್ಟ್'ಗೆ ಕೇಂದ್ರ ಸರ್ಕಾರದ ವಿಶೇಷ ಸಮಿತಿ ಮಂಗಳವಾರ ತಿಳಿಸಿದೆ.
 
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ರದ್ದುಪಡಿಸಿ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶವಾಗಿ ಪರಿವರ್ತಿಸಿದ ಬಳಿಕ ಕಳೆದ 1 ವರ್ಷದಿಂದ ಜಮ್ಮು ಕಾಶ್ಮೀರದಲ್ಲಿ ಅತ್ಯಂತ ವೇಗದ ಇಂಟರ್ನೆಟ್ ಸೇವೆಗಳನ್ನು ರದ್ದುಪಡಿಸಲಾಗಿತ್ತು. 

ಈ ಕುರಿತು ಆಗಸ್ಟ್ 7 ರಂದು ನಿರ್ದಿಷ್ಟ ಪ್ರದೇಶಗಳಲ್ಲಿ 4ಜಿ ಸೇವೆಗಳನ್ನು ಮರುಸ್ಥಾಪಿಸುವ ಸಾಧ್ಯತೆಯನ್ನು ಅನ್ವೇಷಿಸುವಂತೆ ಜಮ್ಮು ಕಾಶ್ಮೀರದ ಆಡಳಿತಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. 

ಇದರಂತೆ ಸುಪ್ರೀಂಕೋರ್ಟ್'ಗೆ  ಮಾಹಿತಿ ನೀಡಿರುವ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು, ಜಮ್ಮು ಮತ್ತು ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ ಆಗಸ್ಟ್ 15 ಬಳಿಕ ಪ್ರಾಯೋಗಿಕ ಆಧಾರದ ಮೇಲೆ 4ಜಿ ಇಂಟರ್ನೆಟ್ ಸೇವೆಗಳಿಗೆ ಅವಕಾಶ ನೀಡಲಾಗುವುದು. ಆದರೆ, ಅಂತರ್ ರಾಷ್ಟ್ರೀಯ ಗಡಿ ಅಥವಾ ಗಡಿ ನಿಯಂತ್ರಣ ರೇಖೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ನಿರ್ಬಂಧ ಸಡಿಲಿಕೆ ಇರುವುದಿಲ್ಲ. ಉಗ್ರರ ಚಟುವಟಿಕೆಗಳು ಕಡಿಮೆ ಇರುವ ಪ್ರದೇಶಗಳಲ್ಲಿ 4ಜಿ ಇಂಟರ್ನೆಟ್ ಸೇವೆ ಲಭ್ಯವಿರಲಿದೆ. ಸರ್ಕಾರ 2 ತಿಂಗಳ ಬಳಿಕ ಪರಿಸ್ಥಿತಿ ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com