ಕೊರೋನಾ ನಿರ್ವಹಣೆ: ಕರ್ನಾಟಕ, ಆಂಧ್ರ ಸೇರಿದಂತೆ 10 ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್

ದೇಶಾದ್ಯಂತ ಮಾರಕ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ, ಆಂಧ್ರ ಪ್ರದೇಶ ಸೇರಿದಂತೆ 10 ರಾಜ್ಯಗಳ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದಾರೆ.
ಸಿಎಂಗಳೊಂದಿಗೆ ಪ್ರಧಾನಿ ಮೋದಿ ಸಭೆ
ಸಿಎಂಗಳೊಂದಿಗೆ ಪ್ರಧಾನಿ ಮೋದಿ ಸಭೆ

ನವದೆಹಲಿ; ದೇಶಾದ್ಯಂತ ಮಾರಕ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ, ಆಂಧ್ರ ಪ್ರದೇಶ ಸೇರಿದಂತೆ 10 ರಾಜ್ಯಗಳ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದಾರೆ.

ಇಂದು ಬೆಳಗ್ಗೆ 11.30ಕ್ಕೆ ಸಭೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಪಂಜಾಬ್, ಬಿಹಾರ, ಗುಜರಾತ್, ತೆಲಂಗಾಣ, ಉತ್ತರ ಪ್ರದೇಶ ರಾಜ್ಯ ಸರ್ಕಾರಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಈ ಸಭೆಯಲ್ಲಿ ಪ್ರಮುಖವಾಗಿ ಕಳೆದ  ತಿಂಗಳ ಆರಂಭವಾದ ಅನ್ ಲಾಕ್ 3 ಕುರಿತಂತೆ ನಾಯಕರು ಚರ್ಚೆ ನಡೆಸಿದ್ದು, ಸೋಂಕು ಪ್ರಸರಣವನ್ನು ನಿಯಂತ್ರಿಸುವ ಸಂಬಂಧ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಕ್ವಾರಂಟೈನ್'ನಲ್ಲಿ ಕರ್ನಾಟಕ ಸಿಎಂ, ಯಡಿಯೂರಪ್ಪ ಗೈರು?
ಕೊರೋನಾ ಸೋಂಕಿಗೆ ತುತ್ತಾಗಿ ಗುಣಮುಖರಾಗಿರುವ ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕ್ವಾರಂಟೈನ್ ನಲ್ಲಿರುವ ಪರಿಣಾಮ ಅವರು ಸಭೆಗೆ ಹಾಜರಾದ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com