ಪುಲ್ವಾಮ ಎನ್'ಕೌಂಟರ್: ಓರ್ವ ಉಗ್ರನನ್ನು ಸದೆಬಡಿದ ಸೇನೆ, ಮುಂದುವರೆದ ಕಾರ್ಯಾಚರಣೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. 

ಪುಲ್ವಾಮದ ಕಮ್ರಾಜಿಪೋರಾ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆಂಬ ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. 

ಸೇನಾಪಡೆಗಳು ಕಾರ್ಯಾಚರಣೆಗಿಳಿಯುತ್ತಿದ್ದಂತೆಯೇ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಎನ್ಕೌಂಟರ್ ನಡೆಸಲು ಆರಂಭಿಸಿದ ಸೇನಾಪಡೆ ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. 

ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದು, ಮತ್ತೋರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com