ಕಾಂಗ್ರೆಸ್ ನಲ್ಲಿರುವ ಭಿನ್ನಾಭಿಪ್ರಾಯವನ್ನು ಕ್ಷಮಿಸಿ ಮುನ್ನಡೆಯಬೇಕು: ಅಶೋಕ್ ಗೆಹ್ಲೋಟ್ 

ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಏನೇ ಇದ್ದರೂ ಸಹ ಅದನ್ನು ಕ್ಷಮಿಸಿ ಮುನ್ನಡೆಯಬೇಕೆಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. 
ಕಾಂಗ್ರೆಸ್ ನಲ್ಲಿರುವ ಭಿನ್ನಾಭಿಪ್ರಾಯವನ್ನು ಕ್ಷಮಿಸಿ ಮುನ್ನಡೆಯಬೇಕು: ಅಶೋಕ್ ಗೆಹ್ಲೋಟ್
ಕಾಂಗ್ರೆಸ್ ನಲ್ಲಿರುವ ಭಿನ್ನಾಭಿಪ್ರಾಯವನ್ನು ಕ್ಷಮಿಸಿ ಮುನ್ನಡೆಯಬೇಕು: ಅಶೋಕ್ ಗೆಹ್ಲೋಟ್

ಜೈಪುರ: ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಏನೇ ಇದ್ದರೂ ಸಹ ಅದನ್ನು ಕ್ಷಮಿಸಿ ಮುನ್ನಡೆಯಬೇಕೆಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. 

ಕಾಂಗ್ರೆಸ್ ನ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ವಾಧ್ರ ಭಿನ್ನಮತೀಯ ನಾಯಕ ಸಚಿನ್ ಪೈಲಟ್ ಮನವೊಲಿಕೆ ಮಾಡುವಲ್ಲಿ ಯಶಸ್ವಿಯಾಗಿದ್ದು, ರಾಜಸ್ಥಾನದ ಬಿಕ್ಕಟ್ಟು ಶಮನವಾಗಿದೆ. 

ಸಚಿನ್ ಪೈಲಟ್ ಕಾಂಗ್ರೆಸ್ ನ 18 ಶಾಸಕರ ವಿರುದ್ಧ ಬಂಡಾಯ ಸಾರಿದ್ದರಿಂದ ರಾಜಸ್ಥಾನ ಸರ್ಕಾರ ಅಸ್ಥಿರವಾಗಿತ್ತು. 

ಈ ಬೆಳವಣಿಗೆಗಳ ನಂತರ ರಾಜಸ್ಥಾನ ಕಾಂಗ್ರೆಸ್ ನ ಅಧ್ಯಕ್ಷ ಸ್ಥಾನದಿಂದ ಹಾಗೂ ಉಪಮುಖ್ಯಮಂತ್ರಿ ಹುದ್ದೆಯಿಂದ ಪೈಲಟ್ ಅವರನ್ನು ವಜಾಗೊಳಿಸಲಾಗಿತ್ತು.

ಈಗ ಭಿನ್ನಮತ ಶಮನವಾಗಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅಶೋಕ್ ಗೆಹ್ಲೋಟ್, ದೇಶ, ಜನಗಳ ಹಿತಾಸಕ್ತಿಯ ದೃಷ್ಟಿಯಿಂದ ಭಿನ್ನಮತ ಏನೇ ಇದ್ದರೂ ಸಹ ಅದನ್ನು ಮರೆತು, ಕ್ಷಮಿಸಿ ಮುನ್ನಡೆಯಬೇಕೆಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com