ರಾಜಸ್ಥಾನ: ನಾಳೆಯಿಂದ ಅಧಿವೇಶನ ಆರಂಭ, ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ನಿರ್ಧಾರ

ನಾಳೆಯಿಂದ ಆರಂಭವಾಗಲಿರುವ ವಿಧಾನಸಭಾ ಅಧಿವೇಶನ ಸಂದರ್ಭದಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯವೊಂದನ್ನು ಮಂಡಿಸಲಿದೆ ಎಂದು ಪ್ರತಿಪಕ್ಷ ನಾಯಕ ಗುಲಾಬ್ ಚಂದ್ ಕಟಾರಿಯಾ ಗುರುವಾರ ತಿಳಿಸಿದ್ದಾರೆ.
ಬಿಜೆಪಿ ಹಿರಿಯ ಮುಖಂಡ ಗುಲಾಬ್ ಚಂದ್ ಕಟಾರಿಯಾ
ಬಿಜೆಪಿ ಹಿರಿಯ ಮುಖಂಡ ಗುಲಾಬ್ ಚಂದ್ ಕಟಾರಿಯಾ

ಜೈಪುರ: ನಾಳೆಯಿಂದ ಆರಂಭವಾಗಲಿರುವ ವಿಧಾನಸಭಾ ಅಧಿವೇಶನ ಸಂದರ್ಭದಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದ
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯವೊಂದನ್ನು ಮಂಡಿಸಲಿದೆ ಎಂದು ಪ್ರತಿಪಕ್ಷ ನಾಯಕ ಗುಲಾಬ್ ಚಂದ್ ಕಟಾರಿಯಾ ಗುರುವಾರ ತಿಳಿಸಿದ್ದಾರೆ.

ಇಂದಿಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಭೆಯ ಬಳಿಕ ಕಟಾರಿಯಾ ಸುದ್ದಿಗಾರರಿಗೆ ಮಾಹಿತಿ ನೀಡಿದರು. ರಾಜಸ್ಥಾನದಲ್ಲಿನ ಸುಮಾರು ಒಂದು ತಿಂಗಳ ರಾಜಕೀಯ ಬಿಕ್ಕಟ್ಟಿನ ಬೆನ್ನಲ್ಲೇ, ಅವಿಶ್ವಾಸ
ನಿರ್ಣಯ ಮಂಡಿಸಲು ಬಿಜೆಪಿ ನಿರ್ಧಾರ ಕೈಗೊಂಡಿದೆ. 

ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಇತರ 18 ಮಂದಿ ಶಾಸಕರೊಂದಿಗೆ ಮುಖ್ಯಮಂತ್ರಿ ಅಶೋಕ್  ಗೆಹ್ಲೋಟ್ ವಿರುದ್ಧ ಕಳೆದ ತಿಂಗಳು ಬಂಡಾಯ ಎದಿದ್ದರಿಂದ ಅವರನ್ನು ಉಪ ಮುಖ್ಯಮಂತ್ರಿ ಮತ್ತು ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿತ್ತು.

ಆದಾಗ್ಯೂ, ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಮುಗಿದ ಅಧ್ಯಾಯ, ಎಲ್ಲಾ ಶಾಸಕರು ರಾಜ್ಯದಲ್ಲಿ ಪಕ್ಷ ಹಾಗೂ ಸರ್ಕಾರವನ್ನು ಸದೃಢಗೊಳಿಸಲು ಮತ್ತು ಕೋವಿಡ್-19 , ಆರ್ಥಿಕ ವಿಪತ್ತಿನ ವಿರುದ್ಧ ಹೋರಾಡಲು ಬೆಂಬಲಿಸಿದ್ದಾರೆ ಎಂದು ಕಾಂಗ್ರೆಸ್ ಸೋಮವಾರ ಹೇಳಿಕೆ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com