ಕೋವಿಡ್-19: ದೇಶದಲ್ಲಿ ಒಂದೇ ದಿನ 66,999 ಕೇಸ್ ಪತ್ತೆ, ಸಾವಿನ ಸಂಖ್ಯೆಯಲ್ಲಿ ಬ್ರಿಟನ್ ಹಿಂದಿಕ್ಕಿ 4ನೇ ಸ್ಥಾನಕ್ಕೇರಿದ ಭಾರತ

ಕೊರೋನಾ ವೈರಸ್ ಪ್ರಕರಣಗಳು ಮತ್ತೊಮ್ಮೆ ಭಾರೀ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಗುರುವಾರ ಒಂದೇ ದಿನ ದೇಶದಲ್ಲಿ ಬರೋಬ್ಬರಿ ದಾಖಲೆಯ 66,999 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 23,96,638ಕ್ಕೆ ಏರಿಕೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕೊರೋನಾ ವೈರಸ್ ಪ್ರಕರಣಗಳು ಮತ್ತೊಮ್ಮೆ ಭಾರೀ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಗುರುವಾರ ಒಂದೇ ದಿನ ದೇಶದಲ್ಲಿ ಬರೋಬ್ಬರಿ ದಾಖಲೆಯ 66,999 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 23,96,638ಕ್ಕೆ ಏರಿಕೆಯಾಗಿದೆ. 

ಇದೇ ವೇಳೆ ಒಂದೇ ದಿನ 942 ಮಂದಿ ಸಾವಿಗೀಡಾಗಿದ್ದು, ಸಾವಿನ ಸಂಖ್ಯೆ 47,033ಕ್ಕೆ ತಲುಪಿದೆ. ಈ ಮೂಲಕ ಸಾವಿನ ಸಂಖ್ಯೆಯಲ್ಲಿ ಬ್ರಿಟನ್ (46,706)ನ್ನು ಭಾರತ ಹಿಂದಿಕ್ಕಿದ್ದು, ಅಮೆರಿಕಾ, ಬ್ರೆಜಿಲ್ ಹಾಗೂ ಮೆಕ್ಸಿಕೋ ಬಳಿಕ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. 

ಇದೇ ವೇಳೆ 23,96,638 ಮಂದಿ ಸೋಂಕಿತರ ಪೈಕಿ 16,95,982 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶಲ್ಲಿ ಇನ್ನೂ 6,53,622  ಸಕ್ರಿಯ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 8,30,391 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 8,30,391 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ಮಾಹಿತಿ ನೀಡಿದೆ. 

ನಿನ್ನೆ ಒಂದೇ ದಿನ ದೇಶಾದ್ಯಂತ 2,68,45,688 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಆಗಸ್ಟ್ 12ರವರೆಗೂ 8,30,391 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com