ಭಾರತದಲ್ಲಿ ಕೊರೋನಾ ಆರ್ಭಟ: 25 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 49,306 ಮಂದಿ ಬಲಿಪಡೆದ ಮಹಾಮಾರಿ ವೈರಸ್

ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಒಂದೇ ದಿನ 65,002 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 25 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಒಂದೇ ದಿನ 65,002 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 25 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25,26,193ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 996 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮಹಾಮಾರಿ ವೈರಸ್ ದೇಶದಲ್ಲಿ ಈ ವರೆಗೂ 49,036ಯನ್ನು ಬಲಿಪಡೆದುಕೊಂಡಿದೆ. 

ಈ ನಡುವೆ 25,26,193 ಮಂದಿ ಸೋಂಕಿತರ ಪೈಕಿ 18,08,937 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿ ಇನ್ನೂ 6,68,220 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಇನ್ನು ತಮಿಳುನಾಡಿನಲ್ಲಿ ಸಕ್ರಿಯ ಪ್ರಕರಣಗಳು 53,716 ಇದ್ದು, 2,67,015 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 5,514 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. 

ಆಂಧ್ರಪ್ರದೇಶದಲ್ಲಿ 89,907 ಸಕ್ರಿಯ ಪ್ರಕರಣಗಳಿದ್ದು, 1,80,703 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ, 2,475 ಮಂದಿ ಸಾವನ್ನಪ್ಪಿದ್ದಾರೆ. 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 11,366 ಸಕ್ರಿಯ ಪ್ರಕರಣಗಳಿದ್ದು, 1,35,108 ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಾವಿನ ಸಂಖ್ಯೆ 4,178ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 8,68,679 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 8,68,679 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಶನಿವಾರ ಮಾಹಿತಿ ನೀಡಿದೆ. 

ನಿನ್ನೆ ಒಂದೇ ದಿನ ದೇಶಾದ್ಯಂತ 8,68,679 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಆಗಸ್ಟ್ 14ರವರೆಗೂ 2,85,63,095 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com