74ನೇ ಸ್ವಾತಂತ್ರ್ಯ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ದೇಶದಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಎಲ್ಲಾ ಭಾರತೀಯರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ. 

74ನೇ ಸ್ವಾತಂತ್ರ್ಯೋತ್ವ ದಿನಾಚರಣೆ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯ ಕೆಂಪುಕೋಟೆಯಲ್ಲಿ ಇಂದು ಬೆಳಿಗ್ಗೆ 7.30ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಐತಿಹಾಸಿಕ ಭಾಷಣ ಮಾಡಲಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ 4000 ಜನಕ್ಕೆ ಮಾತ್ರ ಆಹ್ವಾನ ನೀಡಲಾಗಿದೆ. ಈ ಬಾರಿ ದೇಶವು ಕೊರೊರೋನಾ ವೈರಸ್ ಭೀತಿ ಹಾಗೂ ಆರ್ಥಿಕ ಮಂದಗತಿ ಎದುರಿಸುತ್ತಿರುವ ಕಾರಣ ಮೋದಿ ಯಾವು ಮಾತುಗಳನ್ನಾಡಲಿದ್ದಾರೆಂಬುದು ಮಹತ್ವ ಪಡೆದುಕೊಂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com