ಕಾಲಪಾನಿ ಗಡಿ ವಿವಾದದ ಬಳಿಕ ಮೊದಲು ಬಾರಿಗೆ ಪ್ರಧಾನಿ ಮೋದಿಗೆ ಕರೆ ಮಾಡಿದ ನೇಪಾಳ ಪ್ರಧಾನಿ!

ಕಾಲಪಾನಿ ಗಡಿ ವಿವಾದದ ಬಳಿಕ ಇದೀಗ ಮೊದಲ ಬಾರಿಗೆ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. 

Published: 15th August 2020 06:07 PM  |   Last Updated: 15th August 2020 06:07 PM   |  A+A-


KP-Oli-Modi

ಕೆಪಿ ಒಲಿ-ಮೋದಿ

Posted By : Vishwanath S
Source : Online Desk

ನವದೆಹಲಿ: ಕಾಲಪಾನಿ ಗಡಿ ವಿವಾದದ ಬಳಿಕ ಇದೀಗ ಮೊದಲ ಬಾರಿಗೆ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. 

74ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲಿ ಕೆ.ಪಿ.ಶರ್ಮಾ ಒಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ 11 ನಿಮಿಷಗಳ ಕಾಲ ಸಂವಾದ ನಡೆಸಿದ್ದಾರೆ. 

ಭಾರತೀಯರು ಮತ್ತು ಕೇಂದ್ರ ಸರ್ಕಾರಕ್ಕೆ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯ ತಿಳಿಸಿದರು. ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಾಯಂ ಸದಸ್ಯರಾಗಿ ಭಾರತ ಆಯ್ಕೆ ಆಗಿರುವುದಕ್ಕೆ ಅಭಿನಂದಿಸಿದರು. 

ಉಭಯ ದೇಶಗಳಲ್ಲಿ ಕೋವಿಡ್ -19 ಸಾಂಕ್ರಾಮಿಕದ ಪರಿಣಾಮವನ್ನು ಕಡಿಮೆ ಮಾಡಲು ಪ್ರಯತ್ನಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾಯಕರು ಪರಸ್ಪರ ಒಗ್ಗಟ್ಟನ್ನು ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ ಪ್ರಧಾನ ಮೋದಿ ನೇಪಾಳಕ್ಕೆ ಭಾರತದ ನಿರಂತರ ಬೆಂಬಲವನ್ನು ನೀಡುವ ಭರವಸೆ ನೀಡಿದೆ ಎಂದು ವಿದೇಶಾಂಗ ಸಚಿವಾಲಯ(ಎಂಇಎ) ಪ್ರಕಟಣೆಯಲ್ಲಿ ತಿಳಿಸಿದೆ.

Stay up to date on all the latest ರಾಷ್ಟ್ರೀಯ news
Poll
Marraige

ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 18 ರಿಂದ ಹೆಚ್ಚಿಸಬೇಕೆ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp