ವರ್ಷದ ಬಳಿಕ ಜಮ್ಮು ಮತ್ತು ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ 4ಜಿ ಇಂಟರ್ನೆಟ್ ಸೇವೆ ಪುನರಾರಂಭ

ವರ್ಷದ ಬಳಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ರಾತ್ರಿ ಗಂದೇರ್ಬಲ್ ಮತ್ತು ಉಧಂಪುರ್ ಜಿಲ್ಲೆಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೈ-ಸ್ಪೀಡ್ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಪುನಃಸ್ಥಾಪಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ವರ್ಷದ ಬಳಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ರಾತ್ರಿ ಗಂದೇರ್ಬಲ್ ಮತ್ತು ಉಧಂಪುರ್ ಜಿಲ್ಲೆಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೈ-ಸ್ಪೀಡ್ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಪುನಃಸ್ಥಾಪಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು. ಎರಡು ಕೇಂದ್ರಾಡಳಿತ 20 ಜಿಲ್ಲೆಗಳಲ್ಲಿ ವರ್ಷದ ಹಿಂದಿನಿಂದಲೂ ಹೈಸ್ಪೀಡ್ ಇಂಟರ್ನೆಟ್ ಸೇವೆಗಳನ್ನು ರದ್ದುಪಡಿಸಲಾಗಿತ್ತು. 

ಈ ಸಂಬಂಧ ಆಗಸ್ಟ್ 11 ರಂದು ಸುಪ್ರೀಂಕೋರ್ಟ್ ನ ಎನ್.ವಿ.ರಣಣ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ, ಸಂಪೂರ್ಣ ಜಮ್ಮು ಮತ್ತು ಕಾಶ್ಮೀರದಲ್ಲಿ 4ಜಿ ನೆಟ್ವರ್ಕ್ ಸೇವೆ ನಿಷೇಧವನ್ನು ಹಿಂಪಡೆಯುವುದಾಗಿ ತಿಳಿಸಿತ್ತು. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಬಳಿಕ ಜಮ್ಮು ಮತ್ತು ಕಾಶ್ಮೀರದ 2 ಜಿಲ್ಲೆಗಳಲ್ಲಿ ಪ್ರಾಯೋಗಿಕವಾದಿ 4ಜಿ ಸೇವೆ ಆರಂಭಗೊಳ್ಳಲಿದೆ. ಬಳಿಕ ಹಂತಹಂತವಾಗಿ ಸಂಪೂರ್ಣ ಜಮ್ಮು ಮತ್ತು ಕಾಶ್ಮೀರಕ್ಕೆ 4ಜಿ ಸೇವೆ ಒದಗಿಸಲಾಗುತ್ತದೆ ಎಂದು ತಿಳಿಸಿತ್ತು. 

4ಜಿ ಸೇವೆ ನೀಡಿದರೆ ಜಮ್ಮ ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನ ಚಟುವಟಿಕೆ ಸೇರಿದಂತೆ ಹಲವು ನಿಯಮಬಾಹಿರ ಚಟುವಟಿಕೆಗಳು ಹೆಚ್ಚಾಗಲಿದೆ ಅನ್ನೋ ಭದ್ರತಾ ಪಡೆಯ ಸೂಚನೆಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಸದ್ಯ ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ಸುಧಾರಿಸಿದೆ. ಹೀಗಾಗಿ ಹಂತ ಹಂತವಾಗಿ 4 ಜಿ ಸೇವೆ ಆರಂಭವಾಗಲಿದೆ. ಆರಂಭದಲ್ಲಿ ಪ್ರಾಯೋಗಿಕವಾಗಿ 2 ಜಿಲ್ಲೆಗಳಲ್ಲಿ 4ಜಿ ಸೇವೆ ಆರಂಭವಾಗಲಿದೆ ಸುಪ್ರೀಂ ಕೋರ್ಟ್‌ನ ಎನ್.ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠಕ್ಕೆ  ಸರ್ಕಾರದ ಆಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಮಾಹಿತಿ ನೀಡಿದ್ದರು. 

ಸಂಪೂರ್ಣ ಜಮ್ಮು ಮತ್ತು ಕಾಶ್ಮೀರದಲ್ಲಿ 4ಜಿ ಸೇವೆಯನ್ನು ಚಾಲನೆಗೊಳಿಸುವ ಪ್ರತಿಕೂಲ ವಾತಾವರಣವಿಲ್ಲ. ಭಯೋತ್ಪಾದನಾ ಚಟುವಟಿಕೆ ಕಡಿಮೆ ಇರುವ 2 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ 4ಜಿ ಸೇವೆ ನಿಷೇಧ ಹಿಂಪಡೆಯಲಾಗುತ್ತದೆ. ಜಮ್ಮ ಮತ್ತು ಕಾಶ್ಮೀರದಲ್ಲಿ 4ಜಿ ಸೇವೆ ಆರಂಭಿಸುವ ಕುರಿತು ಭದ್ರತಾ ಪಡೆಯಿಂದ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ತಿಳಿಸಿದ್ದರು. 

ಇದರಂತೆ ಕಳೆದ ರಾತ್ರಿ "ಗಂದೇರ್ಬಲ್ (ಕಾಶ್ಮೀರ) ಮತ್ತು ಉಧಂಪುರ್ (ಜಮ್ಮು ವಿಭಾಗ) ಜಿಲ್ಲೆಗಳಲ್ಲಿ ಹೈಸ್ಪೀಡ್ ಮೊಬೈಲ್ ಡೇಟಾ ಸೇವೆಗಳನ್ನು ಪ್ರಾಯೋಗಿಕ ಆಧಾರದ ಮೇಲೆ ಪುನಃಸ್ಥಾಪಿಸಲಾಗಿದೆ.

ಗಂದೇರ್ಬಲ್ (ಕಾಶ್ಮೀರ) ಮತ್ತು ಉಧಂಪುರ್ (ಜಮ್ಮು ವಿಭಾಗ) ಜಿಲ್ಲೆಗಳಲ್ಲಿ ಹೈಸ್ಪೀಡ್ ಮೊಬೈಲ್ ಡೇಟಾ ಸೇವೆಗಳನ್ನು ಪ್ರಾಯೋಗಿಕ ಆಧಾರದ ಮೇಲೆ ಪುನಃಸ್ಥಾಪಿಸಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ, ಇಂಟರ್ನೆಟ್ ವೇಗವನ್ನು 2 ಜಿ ಗೆ ಮಾತ್ರ ಸೀಮಿತಗೊಳಿಸಲಾಗಿದೆ ಗೃಹ ಇಲಾಖೆ ಮಾಹಿತಿ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com