ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿದೆ: ಸೇನಾ ಆಸ್ಪತ್ರೆ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ ಎಂದು ದೆಹಲಿಯ ಸೇನಾ ರೆಫರಲ್ ಆಸ್ಪತ್ರೆಯು ಸೋಮವಾರ ಮಾಹಿತಿ ನೀಡಿದೆ. 

Published: 17th August 2020 02:03 PM  |   Last Updated: 17th August 2020 02:03 PM   |  A+A-


pranab mukerjee

ಪ್ರಣಬ್ ಮುಖರ್ಜಿ

Posted By : Manjula VN
Source : ANI

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ ಎಂದು ದೆಹಲಿಯ ಸೇನಾ ರೆಫರಲ್ ಆಸ್ಪತ್ರೆಯು ಸೋಮವಾರ ಮಾಹಿತಿ ನೀಡಿದೆ. 

ಗೌರವಯುತ ಶ್ರೀ ಪ್ರಣಬ್ ಮುಖರ್ಜಿಯವರ ಆರೋಗ್ಯ ಸ್ಥಿತಿ ಈಗಲೂ ಗಂಭೀರವಾಗಿಯೇ ಇದೆ. ಕೃತಕ ಉಸಿರಾಟ ವ್ಯವಸ್ಥೆ (ವೆಂಟಿಲೇಟರ್‌) ಅಳವಡಿಸಿ ಚಿಕಿತ್ಸೆ ಮುಂದುವರೆಸಲಾಗುತ್ತಿದ್ದು, ನುರಿತ ವೈದ್ಯರ ತಂಡ ಪ್ರಣಬ್ ಮುಖರ್ಜಿ ಅವರ ಚಿಕಿತ್ಸೆ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುತ್ತಿದ್ದಾರೆಂದು ತಿಳಿಸಿದೆ. 

ಕಳೆದ ಆಗಸ್ಚ್ 10ರಂದು ಪ್ರಣಬ್ ಮುಖರ್ಜಿ ಅವರಿಗೆ ಕೊರೋನಾ ಪಾಸಿಟಿವ್ ದೃಢವಾಗಿತ್ತು ''ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಪರೀಕ್ಷೆ ನಡೆಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ. ಹೀಗಾಗಿ ಚಿಕಿತ್ಸೆಗೆ ದಾಖಲಾಗಿದ್ದೇನೆ. ಕಳೆದ ಒಂದು ವಾರದಲ್ಲಿ ನನ್ನನ್ನು ಭೇಟಿಯಾದವರು ಐಸೋಲೇಷನ್‌ಗೆ ತೆರಳುವ ಜತೆಗೆ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ,'' ಎಂದು ಟ್ವೀಟ್‌ ಮಾಡಿದ್ದರು.

Stay up to date on all the latest ರಾಷ್ಟ್ರೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp