ಕೊರೋನಾ ಸೋಂಕಿಗೆ ಬಲಿಯಾದ ಟಿಎಂಸಿ ಶಾಸಕ ಸಮರೇಶ್ ದಾಸ್

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಶಾಸಕ ಸಮರೇಶ್ ದಾಸ್ (76) ಪೂರ್ವ ಮಿಡ್ನಾಪೋರ್‌ ಜಿಲ್ಲೆಯ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ನಿಧನರಾಗಿದ್ದಾರೆ.  
ಸಮರೇಶ್ ದಾಸ್
ಸಮರೇಶ್ ದಾಸ್

ಕೊಲ್ಕೋತ್ತಾ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಶಾಸಕ ಸಮರೇಶ್ ದಾಸ್ (76) ಪೂರ್ವ ಮಿಡ್ನಾಪೋರ್‌ ಜಿಲ್ಲೆಯ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ನಿಧನರಾಗಿದ್ದಾರೆ.  

ಇತ್ತಿಚೆಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಸಮರೇಶ್ ದಾಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರ್ಗಾ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಮರೇಶ್ ದಾಸ್‌ಗೆ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. 

ಚಿಕಿತ್ಸೆ ವೇಳೆಯಲ್ಲಿ ಹೃದಯ ಮತ್ತು ಮೂತ್ರಪಿಂಡಕ್ಕೆ ಸಂಬಂಧಿಸಿದ ಆರೋಗ್ಯ ತೊಂದರೆಗಳು ಕಾಣಿಸಿಕೊಂಡವು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪೋರ್ ಜಿಲ್ಲೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 76 ವರ್ಷದ ಶಾಸಕ ಸಮರೇಶ್‌ ಹೃದಯ ಮತ್ತು ಮೂತ್ರಪಿಂಡದ ಸಮಸ್ಯೆಗಳಿಂದ ಚೇತರಿಸಿಕೊಂಡು, ಮತ್ತೆ ಕೊರೊನಾ ಸೋಂಕಿಗೆ ತುತ್ತಾಗಿದ್ದರು.

ಎಗ್ರಾ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾದ  ಸಮರೇಶ್ ದಾಸ್ ಸಧ್ಯ ನಿಧನರಾಗಿದ್ದು, ಇವರ ಸಾವಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com