ಬಾರಾಮುಲ್ಲಾದಲ್ಲಿ ಉಗ್ರರ ದಾಳಿ: ಓರ್ವ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಸಿಆರ್'ಪಿಎಫ್ ಯೋಧರು ಹುತಾತ್ಮ, 

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಸಿಆರ್'ಪಿಎಫ್ ಹುತಾತ್ಮರಾಗಿರುವ ಘಟನೆ ಸೋಮವಾರ ನಡೆದಿದೆ. 
ಉಗ್ರರು ದಾಳಿ ನಡೆಸಿದ ಸ್ಥಳದಲ್ಲಿ ಪೊಲೀಸರು
ಉಗ್ರರು ದಾಳಿ ನಡೆಸಿದ ಸ್ಥಳದಲ್ಲಿ ಪೊಲೀಸರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಸಿಆರ್'ಪಿಎಫ್ ಹುತಾತ್ಮರಾಗಿರುವ ಘಟನೆ ಸೋಮವಾರ ನಡೆದಿದೆ. 

ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಎಂಬ ಪ್ರದೇಶದಕ್ಕೆ ಬಂದಿರುವ ಉಗ್ರರು ಈ ವೇಳೆ ಗಸ್ತು ತಿರುಗುತ್ತಿದ್ದ ಸಿಆರ್'ಪಿಎಫ್ ಪಡೆಯ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಕಾಲ್ಕಿತ್ತಿದ್ದಾರೆ. 

ಉಗ್ರರು ನಡೆಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಓರ್ವ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಸಿಆರ್'ಪಿಎಫ್ ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಹತ್ತಿರದಲ್ಲಿದ್ದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ. 

ಇನ್ನು ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಸ್ಥಳವನ್ನು ಸುತ್ತುವರೆದಿರುವ ಭದ್ರತಾಪಡೆಗಳು ಉಗ್ರರನ್ನು ಸದೆಬಡಿಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com