ಕುಲ್ಗಾಂನಲ್ಲಿ ಸಿಆರ್ ಪಿಎಫ್ ಬಂಕರ್ ಮೇಲೆ ಉಗ್ರರ ಗುಂಡಿನ ದಾಳಿ: ಅಧಿಕಾರಿಗೆ ಗಾಯ

ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ಅರೆಸೇನಾ ಪಡೆಯ ಬಂಕರ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಓರ್ವ ಅದಿಕಾರಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ಅರೆಸೇನಾ ಪಡೆಯ ಬಂಕರ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಓರ್ವ ಅದಿಕಾರಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ 8-45ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ನಿಹಮಾದಲ್ಲಿನ ಕ್ಯಾಂಪ್ ಹೊರಗಡೆ ಸಿಆರ್ ಪಿಎಫ್ 18ನೇ ಬೆಟಾಲಿಯನ್ ನ ಬಂಕರ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಗುಂಡಿನ ದಾಳಿ ವೇಳೆ  ಸಿಆರ್ ಪಿಎಫ್ ನ ಸಹಾಯಕ ಸಬ್ ಇನ್ಸ್ ಪೆಕ್ಟರ್ ಒಬ್ಬರಿಗೆ ಗಾಯವಾಗಿದೆ. ಮುಂದಿನ ಮಾಹಿತಿ ತಿಳಿದುಬರಬೇಕಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com