ಶಿಷ್ಟಾಚಾರ ಉಲ್ಲಂಘನೆ: ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ಕಾಂಗ್ರೆಸ್ ಸಂಸದ ಶಶಿ ತರೂರ್ ನೊಟೀಸ್ 

ಶಿಷ್ಟಾಚಾರ ಉಲ್ಲಂಘನೆ(breach of privilege) ಆರೋಪದ ಮೇಲೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬಿಜೆಪಿ ಸಂಸದ ನಿಶಿಕಾಂತ್ ದುಬೆಗೆ ನೊಟೀಸ್ ಕಳುಹಿಸಿದ್ದಾರೆ. ಶಶಿ ತರೂರ್ ಮಾಹಿತಿ ತಂತ್ರಜ್ಞಾನದ ಸಂಸದೀಯ ಮಂಡಳಿಯ ಮುಖ್ಯಸ್ಥರಾಗಿದ್ದಾರೆ.

Published: 19th August 2020 01:32 PM  |   Last Updated: 19th August 2020 01:32 PM   |  A+A-


Shashi Tharoor

ಶಶಿ ತರೂರ್

Posted By : sumana
Source : PTI

ನವದೆಹಲಿ: ಶಿಷ್ಟಾಚಾರ ಉಲ್ಲಂಘನೆ(breach of privilege) ಆರೋಪದ ಮೇಲೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬಿಜೆಪಿ ಸಂಸದ ನಿಶಿಕಾಂತ್ ದುಬೆಗೆ ನೊಟೀಸ್ ಕಳುಹಿಸಿದ್ದಾರೆ. ಶಶಿ ತರೂರ್ ಮಾಹಿತಿ ತಂತ್ರಜ್ಞಾನದ ಸಂಸದೀಯ ಮಂಡಳಿಯ ಮುಖ್ಯಸ್ಥರಾಗಿದ್ದಾರೆ.

ಫೇಸ್ ಬುಕ್ ನ್ನು ದುರ್ಬಳಕೆ ಮಾಡಿದ ಆರೋಪದ ಮೇಲೆ ಸಂಸದೀಯ ಮಂಡಳಿಯ ಸಭೆಯನ್ನು ಕರೆಯುವುದಾಗಿ ತಾವು ಮಾಡಿರುವ ನಿರ್ಧಾರಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸಂಸದ ನಿಶಿಕಾಂತ್ ದುಬೆ ಅವಹೇಳನಕಾರಿಯಾಗಿ ಟೀಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಶಶಿ ತರೂರ್ ನೊಟೀಸ್ ಜಾರಿ ಮಾಡಿದ್ದಾರೆ.

ಈ ಸಂಬಂಧ ಲೋಕಸಭಾಧ್ಯಕ್ಷ ಒಂ ಬಿರ್ಲಾರಿಗೆ ಪತ್ರ ಬರೆದಿರುವ ಶಶಿ ತರೂರ್, ಟ್ವಿಟ್ಟರ್ ನಲ್ಲಿ ಸಂಸದ ದುಬೆಯವರು ಮಾಡಿರುವ ಟೀಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸ್ಥಾಯಿ ಸಮಿತಿಯ ಅಧ್ಯಕ್ಷರಿಗೆ ಅದರ ಸದಸ್ಯರೊಂದಿಗೆ ಕಾರ್ಯಸೂಚಿಯನ್ನು ಚರ್ಚಿಸದೆ ಏನನ್ನೂ ಮಾಡುವ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp