ಸತತ ನಾಲ್ಕನೇ ಬಾರಿ ಅತ್ಯಂತ ಸ್ವಚ್ಛ ನಗರ ಹೆಗ್ಗಳಿಕೆಗೆ ಪಾತ್ರವಾದ ಇಂದೋರ್

ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣ್-2020 ಪ್ರಶಸ್ತಿಗಳನ್ನು  ಘೋಷಿಸಲಾಗಿದ್ದು, ಮಧ್ಯಪ್ರದೇಶದ ಇಂದೋರ್ ನಗರ ಸತತ 4ನೇ ವರ್ಷ ದೇಶದ ಅತ್ಯಂತ ಸ್ವಚ್ಛನಗರಿ ಎಂಬ ಪ್ರಥಮ ಸ್ಥಾನವನ್ನು ಉಳಿಸಿಕೊಂಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಭೂಪಾಲ್: ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣ್-2020 ಪ್ರಶಸ್ತಿಗಳನ್ನು  ಘೋಷಿಸಲಾಗಿದ್ದು, ಮಧ್ಯಪ್ರದೇಶದ ಇಂದೋರ್ ನಗರ ಸತತ 4ನೇ ವರ್ಷ ದೇಶದ ಅತ್ಯಂತ ಸ್ವಚ್ಛನಗರಿ ಎಂಬ ಪ್ರಥಮ ಸ್ಥಾನವನ್ನು ಉಳಿಸಿಕೊಂಡಿದೆ.

ಗುಜರಾತ್‍ನ ಸೂರತ್ ಮತ್ತು ಮಹಾರಾಷ್ಟ್ರದ  ನವಿ ಮುಂಬೈ ಅನುಕ್ರಮವಾಗಿ ದ್ವಿತೀಯ ಮತ್ತು ತೃತೀಯ ಅತ್ಯುತ್ತಮ ನಗರಗಳ ಸ್ಥಾನ ಪಡೆದಿವೆ. ಗುರುವಾರ ನಡೆದ ಸಮಾರಂಭದಲ್ಲಿ ಪ್ರಸಕ್ತ ಸಾಲಿನ ಸ್ವಚ್ಛ  ಸರ್ವೇಕ್ಷಣಾ ಪ್ರಶಸ್ತಿಯನ್ನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಘೋಷಿಸಿದರು. 

ಕೇಂದ್ರ ಸರ್ಕಾರ ನಡೆಸಿದ ಸ್ವಚ್ಛತಾ ಸಮೀಕ್ಷೆಯಲ್ಲಿ ಸೂರತ್‌ ಮತ್ತು ನವಿ ಮುಂಬೈ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನ ಪಡೆದಿವೆ. ಕೇಂದ್ರ ಸರ್ಕಾರದ ಸ್ವಚ್ಛತಾ ಸಮೀಕ್ಷೆಯಲ್ಲಿ ವಾರಾಣಸಿಯನ್ನು 'ಅತ್ಯುತ್ತಮ ಗಂಗಾ ಪಟ್ಟಣ' ಎಂದು ಆಯ್ಕೆ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com