ಹೃದಯಾಘಾತದಿಂದ ಉತ್ತರ ಪ್ರದೇಶ ಬಿಜೆಪಿ ಶಾಸಕ ಜನಮೇಜಯ್ ಸಿಂಗ್ ನಿಧನ
ಹಾಲಿ ಶಾಸಕ ಡಿಯೋರಾ ಕ್ಷೇತ್ರದ ಬಿಜೆಪಿ ಶಾಸಕ ಜನಮೆಜಯ್ ಸಿಂಗ್ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ವಕ್ತಾರ ಚಂದ್ರಮೋಹನ್ ತಿಳಿಸಿದ್ದಾರೆ.
Published: 21st August 2020 10:54 AM | Last Updated: 21st August 2020 10:54 AM | A+A A-

ಜನಮೇಜಯ್ ಸಿಂಗ್
ಲಕ್ನೋ: ಹಾಲಿ ಶಾಸಕ ಡಿಯೋರಾ ಕ್ಷೇತ್ರದ ಬಿಜೆಪಿ ಶಾಸಕ ಜನಮೆಜಯ್ ಸಿಂಗ್ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ವಕ್ತಾರ ಚಂದ್ರಮೋಹನ್ ತಿಳಿಸಿದ್ದಾರೆ.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಫೇಸ್ ಮೇಕರ್ ಅಳವಡಿಕೆಯ ವೇಳೆ ಸಾವನ್ನಪ್ಪಿದ್ದಾರೆ ಎಂದು ಮೋಹನ್ ಹೇಳಿದ್ದಾರೆ.
ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಸ್ಪೀಕರ್ ಹೃದಯ್ ನಾರಾಯಣ ದೀಕ್ಷಿತ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದರು.