ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಸೆಪ್ಟೆಂಬರ್ 30ರೊಳಗೆ ವಿಚಾರಣೆ ಪೂರ್ಣಗೊಳಿಸಿ; ಅಂತಿಮ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 30ರೊಳಗೆ ವಿಚಾರಣೆ ಪೂರ್ಣಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಶನಿವಾರ ಆದೇಶ ನೀಡಿದ್ದು, ತಾನು ಈ ಹಿಂದೆ ನೀಡಿದ್ದ ಅಂತಿಮ ಗಡುವನ್ನು ವಿಸ್ತರಣೆ ಮಾಡಿದೆ.

Published: 22nd August 2020 07:14 PM  |   Last Updated: 22nd August 2020 07:14 PM   |  A+A-


Supreme court

ಸುಪ್ರೀಂ ಕೋರ್ಟ್

Posted By : Srinivasamurthy VN
Source : PTI

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 30ರೊಳಗೆ ವಿಚಾರಣೆ ಪೂರ್ಣಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಶನಿವಾರ ಆದೇಶ ನೀಡಿದ್ದು, ತಾನು ಈ ಹಿಂದೆ ನೀಡಿದ್ದ ಅಂತಿಮ ಗಡುವನ್ನು ವಿಸ್ತರಣೆ ಮಾಡಿದೆ.

ಬಿಜೆಪಿ ನಾಯಕರಾದ ಎಲ್‌.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ ಸೇರಿದಂತೆ ಇತರರ ವಿರುದ್ಧ ನಡೆಯುತ್ತಿರುವ 1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಲು ಲಖನೌ ಸಿಬಿಐ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್‌ ಸೆಪ್ಟೆಂಬರ್ 30ರ ಗಡುವು ನೀಡಿದೆ.

'ವಿಶೇಷ ನ್ಯಾಯಾಧೀಶರಾದ ಶ್ರೀ ಸುರೇಂದ್ರ ಕುಮಾರ್ ಯಾದವ್ ಅವರ ವರದಿಯನ್ನು ಓದಿದ ನಂತರ ತೀರ್ಪು ದಾನ ಸೇರಿದಂತೆ ವಿಚಾರಣೆಯನ್ನು ಪೂರ್ಣಗೊಳಿಸಲು ನಾವು ಒಂದು ತಿಂಗಳ ಸಮಯವನ್ನು ನೀಡುತ್ತೇವೆ, ಅಂದರೆ, ಸೆಪ್ಟೆಂಬರ್ 30, 2020 ರವರೆಗೆ, ನ್ಯಾಯಮೂರ್ತಿಗಳಾದ ನವೀನ್ ಸಿನ್ಹಾ ಮತ್ತು  ಇಂದಿರಾ ಬ್ಯಾನರ್ಜಿ ಅವರನ್ನೂ ಒಳಗೊಂಡ ನ್ಯಾಯಪೀಠ ಆಗಸ್ಟ್ 19 ರಂದು ಅಂಗೀಕರಿಸಿದ ಆದೇಶದಲ್ಲಿ ತಿಳಿಸಿದೆ.ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಲು ಸುಪ್ರೀಂಕೋರ್ಟ್  ಗಡುವು ನಿಗದಿಪಡಿಸಿದ ನಾಲ್ಕನೇ ಉದಾಹರಣೆಯಾಗಿದೆ.

'ಯಾದವ್ ಅವರ ವರದಿಗಳನ್ನು ಪರಿಶೀಲಿಸಿದೆವು. ವಿಚಾರಣೆಯು ಅಂತಿಮ ಹಂತದಲ್ಲಿದೆ. ತೀರ್ಪು ನೀಡಲು ಸೆಪ್ಟೆಂಬರ್ 30ರವರೆಗೆ ಸಮಯಾವಕಾಶ ನೀಡಲು ಅನುಮತಿ ನೀಡುತ್ತಿದ್ದೇವೆ ಎಂದು ಪೀಠ ಹೇಳಿದೆ. ಈ ಮೊದಲಿನ ಆದೇಶದಲ್ಲಿ ಸುಪ್ರೀಂ ಕೋರ್ಟ್‌ ಆಗಸ್ಟ್‌ 30ರ ಒಳಗೆ ವಿಚಾರಣೆ ಪೂರ್ಣಗೊಳಿಸಿ,  ತೀರ್ಪು ನೀಡಬೇಕು ಎಂದು ಸೂಚಿಸಿತ್ತು. ವಿಡಿಯೊ ಕಾನ್ಫರೆನ್ಸ್‌ ಸಾಧ್ಯತೆಗಳನ್ನು ಬಳಸಿ ಸಾಕ್ಷಿಗಳ ಹೇಳಿಕೆ ದಾಖಲಿಸಿ. ಈ ಗಡುವನ್ನು ಮೀರಬೇಡಿ ಎಂದು ಹೇಳಿತ್ತು. ಆದರೆ ಸಾಕ್ಷ್ಯಾಧಾರಗಳ ರೆಕಾರ್ಡಿಂಗ್ ಪೂರ್ಣಗೊಂಡಿದೆ ಮತ್ತು ವಿಚಾರಣೆಯನ್ನು ಮುಕ್ತಾಯಗೊಳಿಸಲು ಯಾವುದೇ ವಿಳಂಬವಿಲ್ಲ ಎಂದು  ಖಚಿತಪಡಿಸಿಕೊಳ್ಳಲು ಯಾದವ್ ಅವರನ್ನು ವಿಡಿಯೋ ಕಾನ್ಫರೆನ್ಸಿಂಗ್ ಸೌಲಭ್ಯಗಳನ್ನು ಬಳಸಿಕೊಳ್ಳುವಂತೆ ಕೇಳಿಕೊಂಡರು.

ಇದೀಗ ನ್ಯಾಯಾಧೀಶರ ವಿನಂತಿಯ ಮೇರೆಗೆ ಗಡುವನ್ನು ಆಗಸ್ಟ್‌ 31ಕ್ಕೆ ಈ ಹಿಂದೆ ವಿಸ್ತರಿಸಲಾಗಿತ್ತು. ಇದೀಗ ಸೆಪ್ಟೆಂಬರ್ 30ಕ್ಕೆ ವಿಸ್ತರಿಸಲಾಗಿದೆ.

1992 ರಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ವಿಚಾರಣೆಯಲ್ಲಿದ್ದಾರೆ. ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು (ಸೆಕ್ಷನ್ 153 ಎ), ರಾಷ್ಟ್ರೀಯ ಏಕೀಕರಣದ ಮೇಲೆ ಪರಿಣಾಮ ಬೀರುವ ಹೇಳಿಕೆಗಳನ್ನು  ನೀಡುವುದು (ಸೆಕ್ಷನ್ 153 ಬಿ) ಅಥವಾ ಸಾರ್ವಜನಿಕ ಕಿಡಿಗೇಡಿತನಕ್ಕೆ (ಸೆಕ್ಷನ್ 505) ಸೇರಿದಂತೆ ಭಾರತೀಯ ಅಪರಾಧ ಸಂಹಿತೆ (ಐಪಿಸಿ) ಅಡಿಯಲ್ಲಿ ವಿವಿಧ ಅಪರಾಧಗಳಿಗೆ ಅವರ ಮೇಲೆ ಆರೋಪ ಹೊರಿಸಲಾಗಿದೆ.

Stay up to date on all the latest ರಾಷ್ಟ್ರೀಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp