ಬಾರಾಮುಲ್ಲಾ ಎನ್‌ಕೌಂಟರ್: ಉಗ್ರನೋರ್ವನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಉತ್ತರ ಕಾಶ್ಮೀರ ಜಿಲ್ಲೆಯಾದ ಇಲ್ಲಿ ಶನಿವಾರ ಆರಂಭಿಸಲಾದ ತೀವ್ರ ಶೋಧ ಕಾರ್ಯಾಚರಣೆ ವೇಳೆ (ಸಿಎಎಸ್ಒ) ನಡೆದ ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಿವೆ ಎಂದು ಪೊಲೀಸ್ ವಕ್ತಾರರು ಶನಿವಾರ ತಿಳಿಸಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ

ಬಾರಾಮುಲ್ಲಾ(ಜಮ್ಮು ಕಾಶ್ಮೀರ): ಉತ್ತರ ಕಾಶ್ಮೀರ ಜಿಲ್ಲೆಯಾದ ಇಲ್ಲಿ ಶನಿವಾರ ಆರಂಭಿಸಲಾದ ತೀವ್ರ ಶೋಧ ಕಾರ್ಯಾಚರಣೆ ವೇಳೆ (ಸಿಎಎಸ್ಒ) ನಡೆದ ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಿವೆ ಎಂದು ಪೊಲೀಸ್ ವಕ್ತಾರರು ಶನಿವಾರ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸ್, ರಾಷ್ಟ್ರೀಯ ರೈಫಲ್ಸ್ , ವಿಶೇಷ ಕಾರ್ಯಾಚರಣೆ ತಂಡ (ಎಸ್‌ಒಜಿ) ಮತ್ತು ಸಿಆರ್‌ಪಿಎಫ್ ಪಡೆಗಳು ಇಂದು ಬಾರಾಮುಲ್ಲಾ ಜಿಲ್ಲೆಯ ಕ್ರೆರಿಯ ಚೆಕ್-ಇ-ಸಲೂಸಾದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ಅರಂಭಿಸಿದ್ದವು.

ಭದ್ರತಾ ಪಡೆಗಳು ಹಳ್ಳಿಯ ಒಂದು ನಿರ್ದಿಷ್ಟ ಪ್ರದೇಶದತ್ತ ಸಾಗುತ್ತಿದ್ದಾಗ ಅಡಗಿದ್ದ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಮನಸೋಚ್ಛೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿವೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ವರದಿಗಳು ಬಂದಾಗ ಅಪರಿಚಿತ ಉಗ್ರ ಗುಂಡಿನ ಚಕಮಕಿಯಲ್ಲಿ ಹತನಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಭದ್ರತಾ ಪಡೆಗಳನ್ನು ಪಕ್ಕದ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com