ಕಾಂಗ್ರೆಸಿನಲ್ಲಿ ನಾಯಕತ್ವ ಸಮಸ್ಯೆ : 20 ಉನ್ನತ ಮಟ್ಟದ ಮುಖಂಡರಿಂದ ಸೋನಿಯಾ ಗಾಂಧಿಗೆ ಪತ್ರ

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು  ಮುಖಂಡರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ.ನಾಳೆ ನಡೆಯಲಿರುವ  ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು  ಮುಖಂಡರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ.ನಾಳೆ ನಡೆಯಲಿರುವ  ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪಕ್ಷದೊಳಗಿನ ಆತಂರಿಕ ಭಿನ್ನಾಭಿಪ್ರಾಯಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯಬೇಕೆಂದು ಹಿರಿಯ ನಾಯಕರು ಬಯಸಿದ್ದಾರೆ.ಪಕ್ಷದ ಭವಿಷ್ಯ ಕ್ಷೀಣತೆ ವಿಚಾರವಾಗಿ ಮುಖಂಡರ ನಡುವಣ ಸಂಘರ್ಘದ ನಂತರ ನಾಳೆ ಆನ್ ಲೈನ್ ಸಭೆ ನಡೆಯಲಿದೆ.

ಸಂಸತ್ ಸದಸ್ಯರು, ಮಾಜಿ ಸಚಿವರು , ಮುಖ್ಯಮಂತ್ರಿಗಳು ಮತ್ತು  ಕಾರ್ಯಕಾರಿ ಸಮಿತಿ ಸದಸ್ಯರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿದ್ದಾರೆ. ಆದರೆ, ನಿರ್ದೇಶನದ ಕೊರತೆಯಿಂದಾಗಿ ಹಿರಿಯ ಹಾಗೂ ಯುವ ಮುಖಂಡರಲ್ಲಿ ಅಸಮಾಧಾನವಿದೆ ಎಂಬುದು  ತಿಳಿದುಬಂದಿದೆ.

ಸೋನಿಯಾ ಗಾಂಧಿ ಅವರಿಗೆ 73 ವರ್ಷ ವಯಸ್ಸಾಗಿದ್ದು, ಅವರ ಆರೋಗ್ಯದ ಸಮಸ್ಯೆಯಿಂದಾಗಿ ಆ ಸ್ಥಾನದಲ್ಲಿ ಮುಂದುವರೆಯುವುದು ಕಷ್ಟಸಾಧ್ಯ. ಹೀಗಾಗಿ ರಾಹುಲ್ ಗಾಂಧಿ ಮತ್ತೆ ಪಕ್ಷದ ಅಧ್ಯಕ್ಷರಾಗಬೇಕು ಎಂದು ಬಯಸುವವರಿಂದ ಬಲವಾದ ಒತ್ತಾಯಗಳು ಕೇಳಿಬರುತ್ತಿವೆ ಎಂದು ಮೂಲಗಳು ಹೇಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com